ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್‌ನಲ್ಲಿ ಮೇಲ್ನೋಟಕ್ಕೆ ಎಲ್ಲವೂ ಸರಿಯಾಗಿಯೇ ಇದ್ದರೂ ಶಾಸಕರು ಹಾಗೂ ಸಚಿವರ ನಡುವೆ ಭಿನ್ನಾಭಿಪ್ರಾಯ ಇರುವ ವಿಷಯ ಜಗಜ್ಜಾಹೀರಾಗಿದೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಏನಿಲ್ಲಾ ಎಂದರೂ ಕನಿಷ್ಠ 20 ಸ್ಥಾನ ಗೆಲ್ಲುವ ಗುರಿಯನ್ನು ಹೈಕಮಾಂಡ್ ನೀಡಿದೆ. ಈ ಎಲ್ಲದರ ಸಾಧ್ಯತೆಗೆ ಮೊದಲು ಪಕ್ಷದ ಒಳಮುನಿಸು ಶಮನವಾಗಬೇಕಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಗಂಭೀರವಾಗಿ ಆಲೋಚಿಸಿದ್ದು, ಮೊದಲು ಪಕ್ಷದೊಳಗಿನ ಸಮಸ್ಯೆಯನ್ನು ಸರಿಪಡಿಸಲು ಸಭೆ ನಡೆಸಲಿದ್ದಾರೆ.
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸಚಿವರು ಹಾಗೂ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಇಂದಿನಿಂದ ಸಭೆ ಆರಂಭಿಸಿದ್ದಾರೆ. ಆರು ಜಿಲ್ಲೆಯ ಶಾಸಕರು,ಸಚಿವರುಗಳ ಜತೆ ಸಭೆ ನಡೆಸಲಿದ್ದು, ಇದೇ ರೀತಿ ಬೇರೆ ಬೇರೆ ಜಿಲ್ಲೆಯ ಶಾಸಕರ ಸಭೆಯನ್ನು ಮಾಡಿ ದೂರು, ಅಹವಾಲು ಆಲಿಸಲಿದ್ದಾರೆ.