ಹೊಸದಿಗಂತ ಡಿಜಿಟಲ್ ಡೆಸ್ಕ್:
ಹರಿಯಾಣದ ನೂಹ್‌ನಲ್ಲಿ ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸುವ ಕಾರ್ಯಾಚರಣೆಗೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಸೋಮವಾರ ತಡೆ ನೀಡಿದೆ.
ಸ್ವಯಂ ಪ್ರೇರಿತವಾಗಿ ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಜಿ.ಎಸ್.ಸಂಧ್‌ವಾಲಿಯಾ ಅವರು, ಜಿಲ್ಲಾಡಳಿತವು ನಡೆಸುತ್ತಿರುವ ಅಕ್ರಮ ಕಟ್ಟಡಗಳ ನೆಲಸಮ ಕಾರ್ಯಾಚರಣೆಯನ್ನು ತಡೆಹಿಡಿಯುವಂತೆ ಹರಿಯಾಣ ಸರ್ಕಾರಕ್ಕೆ ನಿರ್ದೇಶನ ನೀಡಿದ್ದಾರೆ.
ಅನಧಿಕೃತ ಕಟ್ಟಡಗಳನ್ನು ನೆಲಸಮಗೊಳಿಸುವ ಕಾರ್ಯಾಚರಣೆಯನ್ನು ನಿಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ನೂಹ್ ಜಿಲ್ಲಾಧಿಕಾರಿ ತಿಳಿಸಿದ್ದಾರೆ.