ಹೊಸದಿಗಂತ ವರದಿ,ಕಲಬುರಗಿ:
ಕಾರಿನ ಟೈಯರ್ ಬ್ಲಾಸ್ಟ್ ಆಗಿ ಪಲ್ಟಿ ಹೊಡೆದ ಪರಿಣಾಮ ಹೆಡ್ ಕಾನ್ಸ್ಟೇಬಲ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ್ ಪೆಟ್ರೋಲ್ ಬಂಕ್ ಹತ್ತಿರ ಸೋಮವಾರ ಸಂಜೆ ನಡೆದಿದೆ.
ಕಲಬುರಗಿ ನಗರದ ಅಶೋಕ್ ನಗರ ಪೋಲಿಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದ ಮೊಯಿಜುದ್ದಿನ್ ( 52) ಎಂಬಾತ ಸಾವನ್ನಪ್ಪಿದ್ದಾನೆ.
ಘಟನೆಯಲ್ಲಿ ಮೊಯಿಜುದ್ದಿನ್ ಸಹೋದರ ನಜಮುದ್ದಿನ ಮತ್ತು ಇನ್ನೋರ್ವ ವ್ಯಕ್ತಿಗೆ ಗಾಯವಾಗಿದ್ದು, ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಕಲಬುರಗಿ ನಗರದಿಂದ ಸೇಡಂ, ನ ಮಳಖೇಡಕ್ಕೆ ಕಾರಿನಲ್ಲಿ ಪ್ರಯಾಣ ಮಾಡುವಾಗ ಟೈಯರ್ ಬ್ಲಾಸ್ಟ್ ಆಗಿದ್ದು,ಕಾರು ಪಲ್ಟಿ ಹೊಡೆದಿದೆ.
ಈ ಕುರಿತು ಮಳಖೇಡ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.