ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿರುದ್ಧದ ಅವಿಶ್ವಾಸ ನಿರ್ಣಯದ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಲೋಕಸಭೆಯಲ್ಲಿ ಮಾತನಾಡಲಿದ್ದಾರೆ.
ರಾಹುಲ್ ಅವರೇ ಪಿಎಂ ನರೇಂದ್ರ ಮೋದಿ (PM Narendra Modi) ಸರ್ಕಾರದ ವಿರುದ್ಧ ಕೆಳಮನೆಯಲ್ಲಿ ಅವಿಶ್ವಾಸ ಚರ್ಚೆಯನ್ನು ಪ್ರಾರಂಭಿಸಲಿದ್ದಾರೆ ಎಂದು ಸಂಸತ್ತಿನ ಮೂಲಗಳು ತಿಳಿಸಿವೆ.
ಮಾನಹಾನಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಶಿಕ್ಷೆಗೆ ತಡೆ ನೀಡಿದ ಬೆನ್ನಲ್ಲೇ ಸಂಸತ್ ಸದಸ್ಯತ್ವ ಅನರ್ಹತೆಯನ್ನು ಹಿಂಪಡೆದಿದ್ದು, ಸದಸ್ಯತ್ವವನ್ನು ಮರುಸ್ಥಾಪಿಸಲಾಗಿದೆ.
ಇದರ ಬೆನ್ನಲ್ಲೇ ಇಂದಿನ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯಲ್ಲಿ ಭಾಗವಹಿಸಲಿರುವ ರಾಹುಲ್, ಪ್ರಸ್ತಾವಿತ ನಿಲುವಳಿ ಮೇಲೆ ಮಾತನಾಡಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುವ ಸಾಧ್ಯತೆ ಇದೆ.
ಮಣಿಪುರ ಹಿಂಸಾಚಾರದ ವಿಷಯದ ಬಗ್ಗೆ ಚರ್ಚೆಗಾಗಿ ಮತ್ತು ಪ್ರಧಾನಿ ಮೋದಿಯವರ ಹೇಳಿಕೆಗೆ ಒತ್ತಾಯಿಸಿ ಪ್ರತಿಪಕ್ಷಗಳ ಒಕ್ಕೂಟ ಇಂಡಿಯಾ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿತ್ತು.