ಆಗಸ್ಟ್ 12-13 ರಂದು ವಯನಾಡ್‌ಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಭೇಟಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಆಗಸ್ಟ್ 12 ಮತ್ತು 13ರಂದು ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಮಂಗಳವಾರ ತಿಳಿಸಿದ್ದಾರೆ.

ಈ ಬಗ್ಗೆ ಕೆಸಿ ವೇಣುಗೋಪಾಲ್ ಅವರು ಸಾಮಾಜಿಕ ಮಾಧ್ಯಮ ʼಎಕ್ಸ್‌ʼನಲ್ಲಿ ಮಾಹಿತಿ ನೀಡಿದ್ದು, “ಆಗಸ್ಟ್ 12-13 ರಂದು ರಾಹುಲ್ ಗಾಂಧಿ ಅವರು ತಮ್ಮ ಕ್ಷೇತ್ರವಾದ ವಯನಾಡ್‌ಗೆ ಭೇಟಿ ನೀಡಲಿದ್ದಾರೆ. ಪ್ರಜಾಪ್ರಭುತ್ವವು ಗೆದ್ದಿದೆ ಮತ್ತು ಸಂಸತ್ತಿಗೆ ತಮ್ಮ ಧ್ವನಿ ಮರಳಿದೆ ಎಂದು ವಯನಾಡಿನ ಜನರು ಹರ್ಷ ವ್ಯಕ್ತಪಡಿಸಿದ್ದಾರೆ. ರಾಹುಲ್ ಗಾಂಧಿ ಕೇವಲ ಸಂಸದರಲ್ಲ, ಅವರು ಕುಟುಂಬದ ಸದಸ್ಯರಾಗಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಸೋಮವಾರ ಲೋಕಸಭೆ ಸದಸ್ಯರಾಗಿ ಮರುಸೇರ್ಪಡೆಗೊಂಡ ನಂತರ ಇದು ಅವರ ಮೊದಲ ಭೇಟಿಯಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!