ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಪಾರ್ಥಿವ ಶರೀರ ಈಗಾಗಲೆ ಬೆಂಗಳೂರಿಗೆ ಆಗಮಿಸಿದ್ದು, ಮಲ್ಲೇಶ್ವರಂನಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರುಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಸ್ಪಂದನಾ ತಂದೆ ಬಿಕೆ ಶಿವರಾಂ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಇಂದು ಬೆಳಗ್ಗೆಯಿಂದಲೇ ಗಣ್ಯರು ಹಾಗೂ ಅಭಿಮಾನಿಗಳು ಅಂತಿಮ ದರುಶನವನ್ನು ಪಡೆದುಕೊಳ್ಳುತ್ತಿದ್ದಾರೆ.
ಇಂದು ಮಧ್ಯಾಹ್ನ 2 ಗಂಟೆಯವರೆಗೆ ಸಾರ್ವಜನಿಕರಿಗೆ ಸ್ಪಂದನಾ ಪಾರ್ಥೀವ ಶರೀರದ ಅಂತಿಮ ದರುಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ 4 ಗಂಟೆಗೆ ಶ್ರೀರಾಂಪುರದ ಹರಿಶ್ಚಂದ್ರ ಘಾಟ್ ನಲ್ಲಿ ಸ್ಪಂದನಾ ಅವರ ಅಂತ್ಯಕ್ರಿಯೆ ನೆರವೇರಿಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.
ಈಗಾಗಲೆ ಕುಟುಂಬಸ್ಥರು, ಸಂಬಂಧಿಕರು ಮತ್ತು ಆಪ್ತರು ಬಿ.ಕೆ. ಶಿವರಾಂ ನಿವಾಸಕ್ಕೆ ಆಗಮಿಸಿ, ಪೂಜೆ ಸಲ್ಲಿಸಿ ದರ್ಶನ ಪಡೆಯಲು ಮುಂದಾಗಿದ್ದಾರೆ. ವಿಜಯ್ ರಾಘವೇಂದ್ರ, ಶ್ರೀ ಮುರುಳಿ ಸೇರಿದಂತೆ ಕುಟುಂಬದವರು ಪೂಜಾ ಕಾರ್ಯ ನೆರವೇರಿಸಿದ್ದು, ಅಂತಿಮ ದರುಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಬಿಗಿ ಭದ್ರತೆ ನೀಡಲಾಗಿದೆ.