ರಾಜ್ಯದ ಹೆಸರು ‘ಕೇರಳಂ’ ಎಂದು ಮರುನಾಮಕರಣ ಮಾಡಲು ಹೊರಟ ಪಿಣರಾಯಿ ಸರಕಾರ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕೇರಳ ಸರಕಾರ ರಾಜ್ಯದ ಹೆಸರನ್ನು ಅಧಿಕೃತವಾಗಿ ‘ಕೇರಳಂ’ ಎಂದು ಬದಲಾಯಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ವಿಧಾನಸಭೆ ಬುಧವಾರ ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಿದೆ.

ನಿರ್ಣಯವನ್ನು ಮಂಡಿಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಸಂವಿಧಾನದ ಎಂಟನೇ ಅನುಸೂಚಿಯಲ್ಲಿ ಸೇರಿಸಲಾದ ಎಲ್ಲಾ ಭಾಷೆಗಳಲ್ಲೂ ರಾಜ್ಯದ ಹೆಸರನ್ನು ‘ಕೇರಳಂ’ ಎಂದು ಬದಲಾಯಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.
ಮಲಯಾಳಂನಲ್ಲಿ ರಾಜ್ಯವನ್ನು ‘ಕೇರಳಂ’ ಎಂದು ಕರೆಯುತ್ತಾರೆಇತರ ಭಾಷೆಗಳಲ್ಲಿ ಅದು ಇನ್ನೂ ಕೇರಳ ಎಂದು ಇದೆ. ಸಂವಿಧಾನದ ಮೊದಲ ಶೆಡ್ಯೂಲ್ನಲ್ಲಿ ರಾಜ್ಯದ ಹೆಸರನ್ನು ‘ಕೇರಳ’ ಎಂದು ಪಟ್ಟಿ ಮಾಡಲಾಗಿದೆ. “ಈ ಸದನವು ಸಂವಿಧಾನದ 3ನೇ ಪರಿಚ್ಛೇದದ ಅಡಿಯಲ್ಲಿ ‘ಕೇರಳಂ’ ಎಂದು ತಿದ್ದುಪಡಿ ಮಾಡಲು ಮತ್ತು ಸಂವಿಧಾನದ ಎಂಟನೇ ಅನುಸೂಚಿಯಲ್ಲಿ ಉಲ್ಲೇಖಿಸಲಾದ ಎಲ್ಲಾ ಭಾಷೆಗಳಲ್ಲಿ ‘ಕೇರಳಂ’ ಎಂದು ಮರುನಾಮಕರಣ ಮಾಡಲು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರ ಸರ್ಕಾರವನ್ನು ಸರ್ವಾನುಮತದಿಂದ ವಿನಂತಿಸುತ್ತದೆ” ಎಂದು ವಿಜಯನ್ ಹೇಳಿದರು.
ಸ್ಪೀಕರ್ ಎಎನ್ ಶಂಸೀರ್ ಅವರು, ಸದಸ್ಯರು ಕೈ ಎತ್ತುವ ಮೂಲಕ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದ್ದಾರೆ ಎಂದು ಘೋಷಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!