ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುತ್ತಿಗೆದಾರರು ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ನ್ಯಾಯ ಕೊಡಿಸಿ ಎಂದು ಕೇಳಿಕೊಂಡಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್, ಗುತ್ತಿಗೆದಾರರು ಯಾರನ್ನು ಬೇಕಾದರೂ ಭೇಟಿ ಮಾಡಬಹುದು. ಅವರನ್ನು ನಾವು ತಡೆಯಲಾಗದು. ಅವರಿಗೆ ಯಾರು ಸಲಹೆ, ಮಾರ್ಗದರ್ಶನ ಕೊಡಬೇಕೋ ಕೊಡುತ್ತಿದ್ದಾರೆ ಎಂದರು.
ಅವರು ಎಲ್ಲೆಲ್ಲಿ ಹೋಗಬೇಕೋ ಹೊಗಲಿ, ಹೋಗುವವರನ್ನು ಯಾರು ತಡೆಯೋಕೆ ಆಗುವುದಿಲ್ಲ. ಅವರ ಹೋರಾಟಕ್ಕೆ ಜಯ ಸಿಗಲಿ. ನಾವು ಎಲ್ಲವನ್ನು ಗಮನಿಸುತ್ತಿದ್ದೇವೆ. ನಾವು ನ್ಯಾಯ, ನೀತಿಯಿಂದ ಸರ್ಕಾರ ನಡೆಸುತ್ತಿದ್ದೇವೆ, ಮುಂದೆಯೂ ನಡೆಸುತ್ತೇವೆ ಎಂದು ಹೇಳಿದರು.