ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಡ್ಯದ ಬಾದನೂರು ಗ್ರಾಮದಲ್ಲಿ ನಿರ್ಮಾಪಕ ಚಂದ್ರಶೇಖರ್ ಮನೆಗೆ ಕಳ್ಳರು ನುಗ್ಗಿದ್ದು, ಬೆಲೆಬಾಳುವ ವಸ್ತು, ನಗದು ದೋಚಿ ಪರಾರಿಯಾಗಿದ್ದಾರೆ.
ನಿರ್ದೇಶಕರು ಬೆಂಗಳೂರಿನಲ್ಲಿ ಇರುವ ಬಗ್ಗೆ ಮಾಹಿತಿ ಪಡೆದುಕೊಂಡ ಕಳ್ಳರು ಮನೆಯ ಬಾಗಿಲು ಮುರಿದು ಕಳ್ಳತನ ಮಾಡಿದ್ದಾರೆ.
ಮೂರು ಲಕ್ಷ ರೂಪಾಯಿ ಹಣ ಹಾಗೂ 35 ಗ್ರಾಂ ಚಿನ್ನ ದೋಚಿದ್ದಾರೆ. ಮಂಡ್ಯ ಪೊಲೀಸರಿಗೆ ಮಾಹಿತಿ ರವಾನೆಯಾಗಿದ್ದು, ಕೂಡಲೇ ಬಂದು ಪರಿಶೀಲನೆ ಮಾಡಿದ್ದಾರೆ. ಮಂಡ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.