ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಮಾಜದಲ್ಲಿ ಹೆಣ್ಣು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಘಟನೆಗಳನ್ನು ನೋಡುತ್ತಿದ್ದೇವೆ. ಬಾಲ್ಯದಿಂದಲೇ ಮನೆಯಲ್ಲಿ ಕೆಲವು ವಿಷಯಗಳ ಬಗ್ಗೆ ಪೋಷಕರು ಅವರಿಗೆ ಶಿಕ್ಷಣ ನೀಡುವ ಅವಶ್ಯಕತೆಯಿದೆ. ಅದರ ಜೊತೆಗೆ ಶಾಲೆಯಲ್ಲೂ ಶಿಕ್ಷಕರು ಮಾಡುವ ಜೀವನದ ಪಾಠ ಅವರಿಗೆ ಬದುಕಿಗೆ ದಾರಿ ದೀಪವಾಗುತ್ತದೆ. ಈ ನಿಟ್ಟಿನಲ್ಲಿ ಶಿಕ್ಷಕಿಯೊಬ್ಬರು ಮಕ್ಕಳಿಗೆ ಒಳ್ಳೆಯ ಸ್ಪರ್ಶ ಮತ್ತು ಕೆಟ್ಟ ಸ್ಪರ್ಶದ ಬಗ್ಗೆ ಹೇಳಿಕೊಡುತ್ತಿರುವ ವಿಡಿಯೋವೊಂದು ಅಂತರ್ಜಾಲದಲ್ಲಿ ವೈರಲ್ ಆಗಿದೆ. ಇದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ಟ್ವಿಟ್ಟರ್ ಬಳಕೆದಾರ ರೋಷನ್ ರೈ (@RoshanKrRaii) ಹಂಚಿಕೊಂಡಿರುವ ವಿಡಿಯೋದಲ್ಲಿ ಶಾಲಾ ಶಿಕ್ಷಕರೊಬ್ಬರು ವಿದ್ಯಾರ್ಥಿಗಳಿಗೆ ‘ಗುಡ್ ಟಚ್’ ಮತ್ತು ‘ಬ್ಯಾಡ್ ಟಚ್’ ಬಗ್ಗೆ ಹೇಳಿಕೊಡುತ್ತಿದ್ದಾರೆ. ಶಿಕ್ಷಕಿ ತಮ್ಮ ಕೈಯಿಂದ ತಲೆಯ ಹಾಗೆ ದೇಹದ ಮೇಲೆ ಮುಟ್ಟಿ ಒಳ್ಳೆಯ ಸ್ಪರ್ಶ ಯಾವುದು, ಕೆಟ್ಟ ಸ್ಪರ್ಶ ಯಾವುದು, ಮಕ್ಕಳು ಹೇಗೆ ಪ್ರತಿಕ್ರಿಯಿಸಬೇಕು ಎಂಬುದರ ಬಗ್ಗೆ ಹೇಳಿಕೊಟ್ಟಿದ್ದಾರೆ. ಧೈರ್ಯ ತುಂಬುವ ಅಪ್ಪುಗೆ, ದೈಹಿಕವಾಗಿ ಅಥವಾ ಭಾವನಾತ್ಮಕವಾಗಿ ನೋಯಿಸುವ ಸ್ಪರ್ಶದ ನಡುವಿನ ವ್ಯತ್ಯಾಸವನ್ನು ವಿವರಿಸುತ್ತಾರೆ.
ಈ ವಿಧಾನವನ್ನು ಭಾರತದಲ್ಲಿನ ಶಿಕ್ಷಣ ಸಂಸ್ಥೆಗಳಲ್ಲಿ ಅಳವಡಿಸಿದರೆ ತುಂಬಾ ಉಪಯುಕ್ತವಾಗುತ್ತದೆ ಎಂದು ನೆಟ್ಟಿಗರು ಕಮೆಂಟ್ ಮಾಡುತ್ತಿದ್ದಾರೆ. ‘ಪಾಸಿಟಿವ್ ಟಚ್’ ಮತ್ತು ‘ನೆಗೆಟಿವ್ ಟಚ್’ ಪರಿಕಲ್ಪನೆಗಳನ್ನು ಮಕ್ಕಳಿಗೆ ತಿಳಿಸುವಲ್ಲಿ ಪೋಷಕರು ಮುಂದಾಗಬೇಕು ಎಂಬುದು ಹಲವರ ಅಭಿಪ್ರಾಯ.
This teacher deserves to get famous 👏
This should be replicated in all schools across India.
Share it as much as you can. pic.twitter.com/n5dx90aQm0
— Roshan Rai (@RoshanKrRaii) August 8, 2023