ಕಲುಷಿತ ಆಹಾರ ಸೇವಿಸಿ 30ಕ್ಕೂ ಹೆಚ್ಚು ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಲುಷಿತ ಆಹಾರ ಸೇವಿಸಿ 30ಕ್ಕೂ ಹೆಚ್ಚು ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಘಟನೆ ಹೊಸಪೇಟೆಯಲ್ಲಿ ನಡೆದಿದೆ.

ನಗರದ ಮಂಜುನಾಥ ರಸ್ತೆಯಲ್ಲಿರುವ ಸರ್ಕಾರಿ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಬುಧವಾರ ರಾತ್ರಿ ಚಿಕನ್‌ ಊಟ ಮಾಡಿದ್ದ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ವಾಂತಿ ಭೇಟಿ ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಇನ್ನುಳಿದ ವಿದ್ಯಾರ್ಥಿನಿಯರಿಗೆ ಹಾಸ್ಟೆಲ್​ನಲ್ಲೇ ಚಿಕಿತ್ಸೆ ನೀಡಿ ಉಪಚರಿಸಲಾಗಿದೆ. ಇದೀಗ ಎಲ್ಲರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

ಘಟನೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ದಿವಾಕರ್ ಎಂ.ಎಸ್., ಜಿ.ಪಂ.ಸಿಇಒ ಸದಾಶಿವ ಪ್ರಭು, ಎಸಿ ನೋಂಗ್ಜಾಯ್ ಅಕ್ರ‌ಮ್ ಅಲಿ ಶಾ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!