Sunday, December 21, 2025

ಯಾವ ಕ್ಷಣದಲ್ಲಾದರೂ ಡಿಕೆ ಶಿವಕುಮಾರ್ ಗೆ ಅಧಿಕಾರ ಹಸ್ತಾಂತರ: ಜನಾರ್ದನ ರೆಡ್ಡಿ ಸ್ಪೋಟಕ ಹೇಳಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಒಂದು ಕಡೆ ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಈಗಲೂ ನಾನೇ ಸಿಎಂ ಮುಂದೆಯೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ, ಇನ್ನೊಂದು ಕಡೆ ಡಿಕೆ ಶಿವಕುಮಾರ್ ಟೆಂಪಲ್ ರನ್ ಮಾಡುತ್ತಿದ್ದಾರೆ.

ಇದರ ಮಧ್ಯ ಶಾಸಕ ಜನಾರ್ದನ ರೆಡ್ಡಿ ಯಾವ ಕ್ಷಣದಲ್ಲಾದರೂ ಡಿಕೆ ಶಿವಕುಮಾರ್ ಗೆ ಅಧಿಕಾರ ಹಸ್ತಾಂತರ ಆಗಲಿದೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಗಂಗಾವತಿಯಲ್ಲಿ ಮಾತನಾಡಿದ ಅವರು, ಯಾವ ಕ್ಷಣದಲ್ಲಾದರೂ ಡಿಸಿಎಂ ಡಿಕೆ ಶಿವಕುಮಾರ್ ಗೆ ಅಧಿಕಾರ ಹಸ್ತಾಂತರ ಆಗಲಿದೆ. ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ ಎಂದ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ಮಾತು ಉಳಿಸಿಕೊಳ್ಳುತ್ತಾರೆ ಅಂತ ಡಿಕೆ ಶಿವಕುಮಾರ್ ಹೇಳುತ್ತಿದ್ದರು. ಹೀಗಾಗಿ ಅಧಿಕಾರ ಹಂಚಿಕೆಗೆ ಸಮಯ ಸನ್ನೀಹೀತವಾಗಿದೆ. ಪ್ರಮಾಣವಚನ ಸ್ವೀಕರಿಸಲು ಡಿಕೆ ಶಿವಕುಮಾರ್ ದೇಗುಲಕ್ಕೆ ಹೋಗುತ್ತಿದ್ದಾರೆ ಡಿನ್ನರ್ ಮೀಟಿಂಗ್ಗಳಿಂದ ಏನು ನಡೆಯುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

error: Content is protected !!