ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಆರು ಮಂದಿ ಮೃತಪಟ್ಟಿದ್ದಾರೆ.
ಚೆನ್ನೈ-ತಿರುಚ್ಚಿ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಆರು ಮಂದಿ ಮೃತಪಟ್ಟಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಿಪ್ಪರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನಗಳಿಗೆ ಗುದ್ದಿದೆ, ಇದರಿಂದಾಗಿ ಸರಣಿ ಅಪಘಾತವಾಗಿದ್ದು, ಪಾದಚಾರಿಗಳು ಸೇರಿ ಆರು ಮಂದಿ ಮೃತಪಟ್ಟಿದ್ದಾರೆ. ಮೂವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಲಾರಿ ಚಾಲಕ ಅಪಘಾತ ಸಂಭವಿಸಿದ ಕೂಡಲೇ ಪರಾರಿಯಾಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.