ಹೊಸದಿಗಂತ ವರದಿ ಮಡಿಕೇರಿ:
ತನ್ನ ಮನೆಯ ಹಿಂಭಾಗದ ಕಾಫಿ ತೋಟದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಸಿದ್ದ ಆಟೋ ಚಾಲಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಸಿದ್ದಾಪುರ ಸಮೀಪದ ಅವರೆಗುಂದ ಗ್ರಾಮದ ನಿವಾಸಿ, ವೃತ್ತಿಯಲ್ಲಿ ಆಟೋ ಚಾಲಕನಾಗಿರುವ ಹೆಚ್.ಪಿ.ಹರೀಶ್ (48) ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಈತನಿಂದ 2ಕೆ.ಜಿ.800ಗ್ರಾಂ ತೂಕದ ಆರು ಗಾಂಜಾ ಗಿಡಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟ ಮತ್ತು ಬಳಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ರಚಿಸಲಾಗಿದ್ದ ಮಡಿಕೇರಿ ಡಿವೈಎಸ್ ಪಿ ಎಂ.ಜಗದೀಶ್, ಮಡಿಕೇರಿ ನಗರ ವೃತ್ತದ ನಿರೀಕ್ಷಕ ಪಿ.ಅನೂಪ್ ಮಾದಪ್ಪ, ಸಿದ್ದಾಪುರ ಠಾಣಾಧಿಕಾರಿ ರಾಘವೇಂದ್ರ ಅವರ ನೇತೃತ್ವದ ತಂಡ ಮಾಹಿತಿ ಸಂಗ್ರಹಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.