ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಎನ್ಸಿಪಿ ಮುಖಂಡ ನವಾಬ್ ಮಲಿಕ್ ಅವರಿಗೆ ಎರಡು ತಿಂಗಳ ಅವಧಿಗೆ ಸುಪ್ರೀಂ ಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ.
ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಬೇಲಾ ಎಂ. ತ್ರಿವೇದಿ ಅವರನ್ನು ಒಳಗೊಂಡ ಪೀಠವು ಅರ್ಜಿ ವಿಚಾರಣೆ ನಡೆಸಿ, ಆದೇಶ ಹೊರಡಿಸಿದೆ.
ನವಾಬ್ ಮಲಿಕ್ ಮೂತ್ರಪಿಂಡ ಸಮಸ್ಯೆ ಸೇರಿದಂತೆ ಇತರ ಕಾಯಿಲೆಗಳಿಂದ ಬಳಲುತ್ತಿದ್ದು, ಪ್ರಸ್ತುತ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಾಮೀನು ಮಂಜೂರು ನೀಡಿದೆ .
ವೈದ್ಯಕೀಯ ಕಾರಣಗಳಿಗಾಗಿ ಜಾಮೀನು ನೀಡುವಂತೆ ಕೋರಿ ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ, ಜುಲೈ 13 ರಂದು ಪ್ರಕರಣ ವಿಚಾರಣೆ ನಡೆಸಿದ ಕೋರ್ಟ್ ಜಾಮೀನು ಅರ್ಜಿಯ ತುರ್ತು ವಿಚಾರಣೆ ನಡೆಸಲು ನಿರಾಕರಿಸಿತ್ತು
ಬಳಿಕ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್ಎ) ಅಡಿಯಲ್ಲಿ ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಮಲಿಕ್ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.