ಹೊಸದಿಗಂತ ಡಿಜಿಟಲ್ ಡೆಸ್ಕ್:
ಏಷ್ಯಾಕಪ್ ಹಾಗೂ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಕ್ರಿಕೆಟ್ ಟೀಮ್ ಗಳು ಸಜ್ಜಾಗುತ್ತಿದ್ದು, ಹೀಗಿರುವಾಗಲೇ ತಮೀಮ್ ಇಕ್ವಾಲ್ ಅವರಿಂದ ತೆರವಾದ ಬಾಂಗ್ಲಾದೇಶ ಏಕದಿನ ತಂಡದ ನಾಯಕ ಹುದ್ದೆಗೆ ಇದೀಗ ಅನುಭವಿ ಆಲ್ರೌಂಡರ್ ಶಕೀಬ್ ಅಲ್ ಹಸನ್ ನೇಮಕವಾಗಿದ್ದಾರೆ.
30ರಿಂದ ಪಾಕಿಸ್ತಾನ & ಶ್ರೀಲಂಕಾದಲ್ಲಿ ಏಷ್ಯಾಕಪ್ ಟೂರ್ನಿ ಆರಂಭವಾದರೆ, ಅಕ್ಟೋಬರ್ 05ರಿಂದ ಭಾರತದಲ್ಲಿ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಚಾಲನೆ ಸಿಗಲಿದೆ. ಈ ಸರಣಿಯಲ್ಲಿ ಬಾಂಗ್ಲಾದೇಶ ತಂಡವನ್ನು ಗೆಲ್ಲಿಸುವ ಜವಬ್ದಾರಿ ಇದೀಗ ಶಕೀಬ್ ಅಲ್ ಹಸನ್ ಹೆಗಲೇರಿದೆ.
ಕ್ರಿಕೆಟ್ ತಂಡವು ಏಷ್ಯಾಕಪ್ ಟೂರ್ನಿಯಲ್ಲಿ ಪಾಲ್ಗೊಂಡ ಬಳಿಕ, ನ್ಯೂಜಿಲೆಂಡ್ ಎದುರು ಸೀಮಿತ ಓವರ್‌ಗಳ ಸರಣಿಯನ್ನಾಡಲಿದೆ. ಇದಾದ ಬಳಿಕ ಪ್ರತಿಷ್ಠಿತ ಏಕದಿನ ವಿಶ್ವಕಪ್ ಟೂರ್ನಿಯನ್ನಾಡಲು ಭಾರತ ಪ್ರವಾಸ ಕೈಗೊಳ್ಳಲಿದೆ. ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ತಮೀಮ್ ಇಕ್ಬಾಲ್, ಏಷ್ಯಾಕಪ್‌ನಿಂದ ಹೊರಬಿದ್ದಿದ್ದಾರೆ. ಹೀಗಾಗಿ ಶಕೀಬ್ ಅಲ್ ಹಸನ್‌ಗೆ ಏಷ್ಯಾಕಪ್ ಹಾಗೂ ವಿಶ್ವಕಪ್ ಟೂರ್ನಿಗೆ ಬಾಂಗ್ಲಾದೇಶ ತಂಡದ ನಾಯಕ ಪಟ್ಟ ಕಟ್ಟಲಾಗಿದೆ.