ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಬಿಎಂಪಿ ಕಚೇರಿ ಆವರಣದಲ್ಲಿರುವ ಗುಣನಿಯಂತ್ರಣ ವಿಭಾಗದ ಪ್ರಯೋಗಾಲಯ ಮತ್ತು ಕಚೇರಿ ಕಟ್ಟಡಕ್ಕೆ ಬೆಂಕಿ ಬಿದ್ದಿದೆ.ಸದ್ಯ ಬೆಂಕಿ ಹತೋಟಿಗೆ ಬಂದಿದ್ದೆ, ಅಗ್ನಿ ಶಾಮಕ ದಳ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವಲ್ಲಿ ಕೆಲಸ ಮಾಡುತ್ತಿದೆ.
ಗ್ಯಾಸ್‌ನಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ಪ್ರಾಥಮಿಕ ವರದಿಯಲ್ಲಿ ಹೇಳಲಾಗಿದೆ.
ಘಟನೆಯಲ್ಲಿ ಸಾವಿರಾರು ಕೋಟಿ ವ್ಯವಹಾರದ ದಾಖಲೆಗಳೆಲ್ಲ ಸುಟ್ಟು ಬೂದಿಯಾಗಿವೆ ಎಂದು ಹೇಳಲಾಗಿದೆ. ಬೆಂಕಿ ಇಡೀ ಕಟ್ಟಡಕ್ಕೆ ವ್ಯಾಪಿಸಿದ್ದರಿಂದ ದಟ್ಟ ಹೊಗೆ ಆವರಿಸಿತ್ತು, ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತರಲು ಸಾಕಷ್ಟು ಶ್ರಮಿಸಬೇಕಾಯಿತು.