`ರಕ್ತದೊಂದಿಗೆ ಆಟವಾಡಿದೆ’: ಬಂಗಾಳ ಚುನಾವಣಾ ಹಿಂಸಾಚಾರದ ಬಗ್ಗೆ ಪ್ರಧಾನಿ ವಾಗ್ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆ ವೇಳೆ ʻರಕ್ತದಿಂದ ಆಟವಾಡಿದೆʼ ಎಂದು ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಶನಿವಾರ ವಾಗ್ದಾಳಿ ನಡೆಸಿದರು.

ಪಶ್ಚಿಮ ಬಂಗಾಳದ ಕ್ಷೇತ್ರೀಯ ಪಂಚಾಯತ್ ರಾಜ್ ಪರಿಷತ್ತಿನಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಪ್ರಧಾನಿ ಮೋದಿ ಹಿಂದಿಯಲ್ಲಿ “ಟಿಎಂಸಿ ನೆ ಖುನಿ ಖೇಲ್ ಖೇಲ್ ಹೈ…” ಎಂದು ಹೇಳಿದರು. ಮೇಲಾಗಿ ಪಕ್ಷ ಮತದಾರರಿಗೆ ಬೆದರಿಕೆ ಹಾಕಿ ಅವರ ಬದುಕನ್ನು ನರಕ ಮಾಡುತ್ತಿದೆ ಎಂದೂ ಪ್ರಧಾನಿ ಆರೋಪಿಸಿದರು.

ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸದಂತೆ ತಡೆಯಲು ಅವರು ಏನು ಬೇಕಾದರೂ ಮಾಡುತ್ತಾರೆ. ಬಿಜೆಪಿ ಕಾರ್ಯಕರ್ತರಿಗೆ ಮಾತ್ರವಲ್ಲದೆ ಮತದಾರರಿಗೂ ಬೆದರಿಕೆ ಹಾಕಲಾಗಿತ್ತು. ಬೂತ್‌ಗಳನ್ನು ಸ್ವಾಧೀನಪಡಿಸಿಕೊಳ್ಳಲು ಗುತ್ತಿಗೆ ನೀಡಲಾಗಿದೆ. ಪಕ್ಷದ ಕೆಲಸವನ್ನು ಪೂರ್ಣಗೊಳಿಸಲು ಮಾರಣಾಂತಿಕ ದಾಳಿಯನ್ನು ತನ್ನ ಸಾಧನವಾಗಿ ಮಾಡಿಕೊಂಡಿತ್ತು ಎಂದು ತೃಣಮೂಲ ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿದರು.

ಪಶ್ಚಿಮ ಬಂಗಾಳದಲ್ಲಿ ಪಂಚಾಯತ್ ಚುನಾವಣಾ ಸಂದರ್ಭದಲ್ಲಿ, ಚುನಾವಣಾ ಸಂಬಂಧಿತ ಹಿಂಸಾಚಾರದಲ್ಲಿ ಒಟ್ಟು 40 ಜನರು ಸಾವನ್ನಪ್ಪಿದರು ಎಂದು ವರದಿಗಳು ತಿಳಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!