ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಹಿಮಾಚಲ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದು ಮಂಡಿ ಜಿಲ್ಲೆಯ ಕಾಂಗೊ ಬಳಿ ಶನಿವಾರ ಕಂದಕಕ್ಕೆ ಉರುಳಿ ನಾಲ್ವರು ಗಾಯಗೊಂಡಿದ್ದಾರೆ.
12 ಮಂದಿ ಪ್ರಯಾಣಿಕರಿದ್ದ ಬಸ್ ಮಂಡಿಯಿಂದ ಶಿಮ್ಲಾಕ್ಕೆ ತೆರಳುತ್ತಿತ್ತು. ಕಾಂಗೊ ತಲುಪಿದಾಗ ರಸ್ತೆ ಬದಿಯ ಕಂದಕಕ್ಕೆ ಉರುಳಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.