ಅತ್ಯುತ್ತಮ ಸೇವೆ ಸಲ್ಲಿಸಿದ 140 ಪೊಲೀಸರಿಗೆ ಕೇಂದ್ರ ಗೃಹ ಸಚಿವರ ಪದಕ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರೀಯ ತನಿಖಾ ದಳದ(ಸಿಬಿಐ) 15 ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಯ 12 ಸೇರಿದಂತೆ 140 ಪೊಲೀಸ್ ಅಧಿಕಾರಿಗಳನ್ನು ಈ ವರ್ಷದ ಕೇಂದ್ರ ಗೃಹ ಸಚಿವರ ತನಿಖಾ ವಿಭಾಗದ ಶ್ರೇಷ್ಠ ಪದಕಕ್ಕೆ ಆಯ್ಕೆ ಮಾಡಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಶನಿವಾರ ಪ್ರಕಟಿಸಿದೆ.

140 ಮಂದಿಯಲ್ಲಿ ರಾಜ್ಯದ 5 ಮಂದಿ ಪೊಲೀಸರು ಆಯ್ಕೆಯಾಗಿದ್ದಾರೆ.

140 ಮಂದಿಯಲ್ಲಿ, 2020 ರಲ್ಲಿ ನಡೆದ ಈಶಾನ್ಯ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದ ತನಿಖೆಗಾಗಿ ದೆಹಲಿ ಪೊಲೀಸ್‌ ನ ಒಬ್ಬ ಡಿಸಿಪಿ ಶ್ರೇಣಿಯ ಅಧಿಕಾರಿ ಸೇರಿದಂತೆ ನಾಲ್ವರು ಸಿಬ್ಬಂದಿಯನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪುರಸ್ಕೃತರಲ್ಲಿ 22 ಮಹಿಳಾ ಅಧಿಕಾರಿಗಳು ಸೇರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!