ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನದ ಗ್ವಾದರ್ ಬಳಿ ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (BLA) ಚೀನಾದ ಇಂಜಿನಿಯರ್ಗಳನ್ನು ಹೊತ್ತೊಯ್ಯುತ್ತಿದ್ದ ಬೆಂಗಾವಲು ವಾಹನವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ .
ಘಟನೆಯಲ್ಲಿ ಒಂಬತ್ತು ಪಾಕ್ ಯೋಧರು ಮತ್ತು ನಾಲ್ವರು ಚೀನೀ ಇಂಜಿನಿಯರ್ಗಳು ಸಾವನ್ನಪ್ಪಿದ್ದಾರೆ. ದಾಳಿ ನಂತರ ಅದರ ಹೊಣೆಯನ್ನು ಬಿಎಲ್ಎ ಹೊತ್ತುಕೊಂಡಿದೆ.
ಪಾಕಿಸ್ತಾನದ ಬೀಜಿಂಗ್-ಹಣಕಾಸಿನ ಗ್ವಾದರ್ ಬಂದರಿನಲ್ಲಿ ಕೆಲಸ ಮಾಡುವ ಚೀನಾದ ಎಂಜಿನಿಯರ್ಗಳ ಬೆಂಗಾವಲುಪಡೆಯ ಮೇಲೆ ಬಲೂಚಿಸ್ತಾನ್ ಲಿಬರೇಶನ್ ಆರ್ಮಿ ಉಗ್ರರು ದಾಳಿ ನಡೆಸಿದ್ದಾರೆ ಎಂದು ಸುದ್ದಿ ಸಂಸ್ಥೆ ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ. ದಾಳಿ ನಡೆದ ಬಗ್ಗೆ ಪಾಕಿಸ್ತಾನ ಭದ್ರತಾ ಏಜೆನ್ಸಿಗಳು ದೃಢಪಡಿಸಿವೆ .