ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಯಾಂಡಲ್‌ವುಡ್ (Sandalwood) ನಟ ಉಪೇಂದ್ರ (Upendra) ವಿರುದ್ಧ ಸಮುದಾಯವೊಂದನ್ನು ನಿಂದಿಸಿದ ಆರೋಪದ ಮೇಲೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯಿಂದ ಎಫ್‌ಐಆರ್ ಪ್ರಕರಣ ದಾಖಲಾಗಿದ್ದು, ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಉಪೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.
ಇಷ್ಟಕ್ಕೂ ಕ್ಷಮೆಯನ್ನು ಸ್ವೀಕರಿಸುವ ದೊಡ್ಡತನವೂ ಇಲ್ಲವೇ? ಯಾಕೆ ಇಷ್ಟೊಂದು ದ್ವೇಷ ಎಂದು ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಉಪೇಂದ್ರ ಪ್ರಶ್ನೆ ಮಾಡಿದ್ದಾರೆ.
ಇಂದು ನನ್ನ ವಿರುಧ್ದ ಮಾತನಾಡುತ್ತಿರುವ ಹಲವರು ಅಂದು ಹುಟ್ಟೇ ಇರಲಿಲ್ಲ. 50 ವರ್ಷಗಳ ಹಿಂದೆ ನನ್ನ ಬಾಲ್ಯ ನಾನು ಎಂತಹ ಪರಿಸರದಲ್ಲಿ ಬೆಳೆದೆ. ಆ ಬಾಲ್ಯದಲ್ಲಿ ನಾನು ಕಂಡ ಆ ಕ್ರೂರ ಬಡತನ, ನನ್ನ ಕಣ್ಣ ಮುಂದೆಯೇ ಬೆಂಕಿ ಹಚ್ಚಿಕೊಂಡು ಆದ ಆತ್ಮಹತ್ಯೆಗಳು, ಹಸಿವು, ಅಪಮಾನ, ತುಳಿತ. ಇದನ್ನು ಅನುಭವಿಸಿ ಬೆಳೆದ ನಾನು ಇಂದು ಒಂದು ವರ್ಗದ ಜನರ ಬಗ್ಗೆ ಅವಮಾನಕಾರಿಯಾಗಿ ಮಾತನಾಡುತ್ತೇನೆಯೇ? ನನಗೆ ಹುಚ್ಚೇ? ಅದಕ್ಕೆ ಕಾರಣವಾದರೂ ಏನು? ಅದರಿಂದ ನನಗೆ ಸಿಗುವ ಲಾಭವಾದರೂ ಏನು? ಇಷ್ಟಕ್ಕೂ ಕ್ಷಮೆಯನ್ನು ಸ್ವೀಕರಿಸುವ ದೊಡ್ಡತನವೂ ಇಲ್ಲವೇ? ಯಾಕೆ ಇಷ್ಟೊಂದು ದ್ವೇಷ ಎಂದು ಉಪೇಂದ್ರ (Upendra) ಸೋಷಿಯಲ್ ಮೀಡಿಯಾದಲ್ಲಿ ಬೇಸರ ಹೊರಹಾಕಿದ್ದಾರೆ.
ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅಡಿ ಉಪೇಂದ್ರ ಮೇಲೆ ಪ್ರಕರಣ ದಾಖಲಾಗಿದ್ದು, ಎಸಿಪಿ ಮಟ್ಟದ ಅಧಿಕಾರಿಯಿಂದ ತನಿಖೆ ನಡೆಯುತ್ತಿದೆ. ಉಪೇಂದ್ರ ಕ್ಷಮಾಪಣೆ ಕೇಳಿದ್ದರು.