ದ್ವೇಷದ ಆಟಕ್ಕೆ ತಡೆ ಹಿಡಿದ ಹೈಕೋರ್ಟ್ ನಡೆ: ನಟ ಉಪೇಂದ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ನಟ ಉಪೇಂದ್ರ (Upendra) ಅವರು ಆಡಿದ ಹೇಳಿಕೆ ವಿರುದ್ಧ ದಾಖಲಾಗಿದ್ದ ಎಫ್​ಐಆರ್​ಗೆ ಹೈಕೋರ್ಟ್​ ತಡೆ ನೀಡಿದ್ದು, ಇದರ ಬೆನ್ನಲ್ಲೇ ತಮ್ಮ ಮನದ ಭಾವನೆಯನ್ನು ವ್ಯಕ್ತಪಡಿಸಿದ್ದಾರೆ.

ಟ್ವಿಟರ್​ (Upendra Twitter) ಮೂಲಕ ಅವರು ತಮ್ಮ ಮಾತುಗಳನ್ನು ಹಂಚಿಕೊಂಡಿದ್ದಾರೆ.

‘ಅನ್ಯಾಯದ ಅನುಮಾನಕ್ಕೇ ಹೆಡೆ ಬಿಚ್ಚಿ ಬುಸುಗುಟ್ಟಿದ ಪಡೆ. ದ್ವೇಷದ ಆಟಕ್ಕೆ ತಡೆ ಹಿಡಿದ ಹೈಕೋರ್ಟ್ ನಡೆ. ಅನಿರೀಕ್ಷಿತ ಬಿಸಿಲ ತಾಪಕ್ಕೆ ಸಹೃದಯಗಳು ಹಿಡಿದ ಪ್ರೀತಿಯ ಕೊಡೆ. ನನ್ನನ್ನು ತಿದ್ದಿ ತೀಡುತ್ತಿರುವ ನಿಮ್ಮೆಲ್ಲರನ್ನೂ ಇನ್ನೂ ಹೆಚ್ಚು ಹೆಚ್ಚು ಪ್ರೀತಿಸುವ ಹೃದಯ ನನಗೆ ಕೊಡೆ ತಾಯಿ… ನನಗೆ ಕೊಡೆ. ಧನ್ಯವಾದಗಳು’ ಎಂದು ಉಪೇಂದ್ರ ಅವರು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದಾರೆ.

 

ಸೋಶಿಯಲ್​ ಮೀಡಿಯಾದಲ್ಲಿ ನೆಟ್ಟಿಗರು ತಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಒಂದು ವರ್ಗದ ಜನರು ಉಪೇಂದ್ರ ಅವರ ಪರವಾಗಿ ನಿಂತಿದ್ದಾರೆ. ಮತ್ತೊಂದು ವರ್ಗದ ಜನರು ಉಪ್ಪಿ ಹೇಳಿದ ಮಾತುಗಳನ್ನು ತೀವ್ರವಾಗಿ ವಿರೋಧಿಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!