ಹೊಸದಿಗಂತ ವರದಿ ವಿಜಯಪುರ:
ಗುಮ್ಮಟ ನಗರಿಯಲ್ಲಿ ಇಂದು ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ನಗರದ ಡಾ.ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಧ್ವಜಾರೋಹಣ ನೆರವೇರಿಸಿ, ಧ್ವಜವಂದನೆ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಸಂಸದ ರಮೇಶ ಜಿಗಜಿಣಗಿ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಪಂ ಸಿಇಒ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ. ಆನಂದಕುಮಾರ, ಪಾಲಿಕೆ ಸದಸ್ಯರು ಸೇರಿ ಗಣ್ಯರು ಪಾಲ್ಗೊಂಡಿದ್ದರು.