ಹೊಸದಿಗಂತ ಡಿಜಿಟಲ್ ಡೆಸ್ಕ್:
77ನೇ ಸ್ವಾತಂತ್ರ್ಯೋತ್ಸವ ದಿನವನ್ನು ನಟ ಶಿವರಾಜ್ ಕುಮಾರ್ ವಿಶೇಷವಾಗಿ ಆಚರಿಸಿದ್ದು, ಮೈಸೂರಿನ ಶಕ್ತಿಧಾಮದಲ್ಲಿ ಮಕ್ಕಳೊಂದಿಗೆ ಇಂದು ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದಾರೆ.
ಡಾ.ರಾಜ್ ಕುಮಾರ್ ಆರಂಭಿಸಿರುವ ಮೈಸೂರಿನ ಶಕ್ತಿಧಾಮದ ಉಸ್ತುವಾರಿ ಜವಾಬ್ದಾರಿ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಮೇಲಿದ್ದು, ಆಗಾಗ್ಗೆ ಇಲ್ಲಿಗೆ ಭೇಟಿ ನೀಡುವ ಮೂಲಕ ಮಕ್ಕಳ ಜೊತೆ ಸಮಯ ಕಳೆಯುತ್ತಾರೆ.
ಅದರ ಜೊತೆಗೆ ವಿಶೇಷ ದಿನವಾದ ಇಂದು ಶಕ್ತಿಧಾಮಕ್ಕೆ ಭೇಟಿ ನೀಡಿ, ಅಲ್ಲಿನ ಮಕ್ಕಳೊಂದಿಗೆ ಧ್ವಜಾರೋಹಣ ನೆರವೇರಿಸಿ ಸಂಭ್ರಮಿಸಿದ್ದಾರೆ. ಶಿವಣ್ಣ ಜೊತೆ ಶಕ್ತಿಧಾಮದ ಶಿಕ್ಷಕರು ಕೂಡ ಸಾಥ್ ನೀಡಿದ್ದಾರೆ. ಧ್ವಜಾರೋಹಣದ ಬಳಿಕ ಸಿಹಿ ಹಂಚಿದ್ದಾರೆ.