ಹೊಸದಿಗಂತ ಡಿಜಿಟಲ್ ಡೆಸ್ಕ್:
ಗ್ಯಾಸ್ ಸ್ಟೇಷನ್‌ನಲ್ಲಿ ಸ್ಫೋಟ ಸಂಭವಿಸಿ 12ಜನರು ಸಾವನ್ನಪ್ಪಿರುವ ಘಟನೆ ರಷ್ಯಾದಲ್ಲಿ ನಡೆದಿದೆ. ಈ ಕುರಿತು ರಷ್ಯಾ ತುರ್ತು ಸಚಿವಾಲಯ ಮಾಹಿತಿ ನೀಡಿದ್ದು, ಅವಘಡಲ್ಲಿ 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ರಷ್ಯಾದ ಕಾಕಸಸ್ ರಿಪಬ್ಲಿಕ್ ಆಫ್ ಡಾಗೆಸ್ತಾನ್‌ನಲ್ಲಿರುವ ಗ್ಯಾಸ್ ಫಿಲ್ಲಿಂಗ್ ಸ್ಟೇಷನ್‌ನಲ್ಲಿ ಸಂಭವಿಸಿದ ಸ್ಫೋಟದಿಂದ 12 ಜನರು ಸಾವನ್ನಪ್ಪಿದ್ದಾರೆ. ಕಾರುಗಳು ನಿಲ್ಲಿಸಿದ್ದ ಜಾಗದಲ್ಲಿ ಬೆಂಕಿ ಕಾಣಿಸಿಕೊಂಡು ಗ್ಯಾಸ್ ಸ್ಟೇಷನ್‌ಗೂ ಬೆಂಕಿ ವ್ಯಾಪಿಸಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.
ಭಯಾನಕ ವಿಡಿಯೋ ವೈರಲ್ ಆಗಿದ್ದು, ಕಟ್ಟಡದಿಂದ ಬೆಂಕಿ ಜ್ವಾಲೆಗಳು ಹೊರಬರುವುದನ್ನು ಕಾಣಬಹುದು. 600 ಚದರ ಮೀಟರ್ ಪ್ರದೇಶದಲ್ಲಿ ಬೆಂಕಿ ವ್ಯಾಪಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಫೋಟದಿಂದ ಉಂಟಾದ ಬೆಂಕಿಯನ್ನು ನಂದಿಸಲು 260 ಅಗ್ನಿಶಾಮಕ ವಾಹನಗಳು ದೌಡಾಯಿಸಿವೆ. ಸ್ಫೋಟಕ್ಕೆ ಕಾರಣ ತಿಳಿದುಬಂದಿಲ್ಲ, ತನಿಖೆ ನಡೆಯುತ್ತಿದೆ.