ಇವರ ನಾಯಕತ್ವದಿಂದ ಭಾರತಕ್ಕೆ ಮೇಲಾಗಿದೆ: ವಾಜಪೇಯಿ ಪುಣ್ಯತಿಥಿಯಂದು ಪ್ರಧಾನಿ ಗೌರವ ನಮನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಾಜಿ ಪ್ರಧಾನಿ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಧೀಮಂತ ನಾಯಕ, ದೇಶ ಕಂಡ ಅಪರೂಪದ ನಾಯಕ, ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಅವರು ಅಗಲಿ ಇಂದಿಗೆ ಐದು ವರ್ಷಗಳು ಕಳೆದಿವೆ. 5ನೇ ಪುಣ್ಯತಿಥಿಯಂದು ಪ್ರಧಾನಿ ನರೇಂದ್ರ ಮೋದಿ, ಅವರ ಸದೈವ್‌ ಅಟಲ್‌ ಸ್ಮಾರಕಕ್ಕೆ ತೆರಳಿ ಶ್ರದ್ಧಾಂಜಲಿ ಸಲ್ಲಿಸಿದರು. ರಾಷ್ಟ್ರದ ಪ್ರಗತಿಯನ್ನು ಹೆಚ್ಚಿಸಲು ಮತ್ತು ಅದನ್ನು 21ನೇ ಶತಮಾನಕ್ಕೆ ಕೊಂಡೊಯ್ಯುವಲ್ಲಿ ದಿವಂಗತ ನಾಯಕರು ಪ್ರಮುಖ ಪಾತ್ರ ವಹಿಸಿದ್ದರು ಎಂಬುದನ್ನು ಸ್ಮರಿಸಿದರು.

ʻವಾಜಪೇಯಿ ಅವರ ನಾಯಕತ್ವದಿಂದ ದೇಶವು ಹೆಚ್ಚು ಪ್ರಯೋಜನ ಪಡೆದಿದೆ. ವಾಜಪೇಯಿಯವರ ಪುಣ್ಯ ತಿಥಿಯಂದು ಭಾರತದ 140 ಕೋಟಿ ಜನರ ಪರವಾಗಿ ನನ್ನ ನಮನಗಳು. ಅವರ ನಾಯಕತ್ವದಿಂದ ಭಾರತಕ್ಕೆ ಮೇಲಾಗಿದೆ. ನಮ್ಮ ರಾಷ್ಟ್ರದ ಪ್ರಗತಿಯನ್ನು ಹೆಚ್ಚಿಸುವಲ್ಲಿ ಮತ್ತು ಅದನ್ನು 21 ನೇ ಶತಮಾನಕ್ಕೆ ಹಲವು ಕ್ಷೇತ್ರಗಳಲ್ಲಿ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆʼ. ಎಂದು ಟ್ವೀಟ್‌ ಮಾಡಿದ್ದಾರೆ.

1924ರಲ್ಲಿ ಗ್ವಾಲಿಯರ್‌ನಲ್ಲಿ ಜನಿಸಿದ ವಾಜಪೇಯಿ ದಶಕಗಳ ಕಾಲ ಬಿಜೆಪಿಯ ದಿಗ್ಗಜ ನಾಯಕರಾಗಿದ್ದವರು.  ವಾಜಪೇಯಿ ಅವರು ಮೇ 16, 1996 ರಿಂದ ಜೂನ್ 1, 1996 ರವರೆಗೆ ಮತ್ತು ಮತ್ತೆ 19 ಮಾರ್ಚ್ 1998 ರಿಂದ 22 ಮೇ 2004 ರವರೆಗೆ ಭಾರತದ ಪ್ರಧಾನಿಯಾಗಿ ಸೇವೆ ಸಲ್ಲಿಸಿದರು. 2018 ಆಗಸ್ಟ್ 16 ರಂದು ದೆಹಲಿಯ AIIMS ಆಸ್ಪತ್ರೆಯಲ್ಲಿ ನಿಧನರಾದರು.

2014ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಮತ್ತು ಭಾರತ ರತ್ನ ಪುರಸ್ಕೃತರನ್ನು ಗೌರವಿಸುವ ಸಲುವಾಗಿ, ಅವರ ಜನ್ಮದಿನವಾದ ಡಿಸೆಂಬರ್ 25 ಅನ್ನು ಪ್ರತಿ ವರ್ಷ ಉತ್ತಮ ಆಡಳಿತ ದಿನವನ್ನಾಗಿ ಆಚರಿಸಲಾಗುವುದು ಎಂದು ಘೋಷಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!