ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಬಿಎಂಪಿ ಕೇಂದ್ರ ಕಚೇರಿಯ ಗುಣಮಟ್ಟ ನಿಯಂತ್ರಣ ಕೊಠಡಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಗಾಯಗೊಂಡವರಲ್ಲಿ ಬಹತೇಕ ಗಾಯಾಳುಗಳ ಆರೋಗ್ಯ ಸ್ಥಿತಿ ಸುಧಾರಿಸಿದೆ.
ಇಬ್ಬರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಇಂಜಿನಿಯರ್ಗಳಾದ ಕಿರಣ್ ಹಾಗೂ ಶಿವಕುಮಾರ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೆಮಿಕಲ್ ಮಿಶ್ರಿತವಾಗಿರುವ ಗಾಳಿಯಲ್ಲಿ ಉಸಿರಾಟ ನಡೆಸಿರುವುದರಿಂದಾಗಿ ಶ್ವಾಸಕೋಶದಲ್ಲಿ ಉರಿಯೂತ ಉಂಟಾಗಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ ಎಂದಿದ್ದಾರೆ.