BIG NEWS | ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದೆ.

ಆದಾಯಕ್ಕೂ ಮೀರಿದ ಆಸ್ತಿ ಸಂಪಾದನೆ ಆರೋಪದ ಮೇಲೆ ಚಿತ್ರದುರ್ಗ, ದಾವಣಗೆರೆ, ಮಡಿಕೇರಿ, ಬೀದರ್‌ನಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಹೊಳಲ್ಕೆರೆಯ ಇಂಜಿನಿಯರ್ ಕೆ. ಮಹೇಶ್ ಪತ್ನಿ ಬಿಬಿಎಂಪಿ ಎಇಹೆಚ್ ಭಾರತಿ ಮನೆ, ದಾವಣಗೆರೆಯಲ್ಲಿ ಮಹೇಶ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.

ಇನ್ನು ಬೀದರ್‌ನ ಹುಮ್ನಾಬಾದ್‌ನಲ್ಲಿ ಕಾನ್ಸ್‌ಟೇಬಲ್ ವಿಜಯ್‌ಕುಮಾರ್ ಮನೆ ಮೇಲೆ ದಾಳಿ ನಡೆಸಲಾಗಿದೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ದಾಳಿ ನಡೆಸಲಾಗಿದೆ. ಬೆಳಗಾವಿಯ ಪಾಲಿಕೆ ಸಹಾಯಕ ಆಯುಕ್ತ ಸಂತೋಷ್ ಅನಿಶೆಟ್ಟರ್ ನಿವಾಸದ ಮೇಲೆಯೂ ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಬೆಂಗಳೂರಿನ ಬಿಬಿಎಂಪಿ ಅಧಿಕಾರಿ ನಟರಾಜು ಮನೆ ಮೇಲೂ ಲೋಕಾಯುಕ್ತ ದಾಳಿ ಮಾಡಿದ್ದು, ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಶಿವನಹಳ್ಳಿ ಗ್ರಾಮದಲ್ಲಿರುವ ನಟರಾಜು ಮನೆಯನ್ನು ಪರಿಶೀಲನೆ ಮಾಡುತ್ತಿದ್ದಾರೆ. ಆದಾಯಕ್ಕೂ ಮೀರಿದ ಆಸ್ತಿ ಸಂಪಾದನೆ ಆರೋಪ ಹಿನ್ನೆಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!