ಇಂದಿನಿಂದ ರಾಹುಲ್ ಗಾಂಧಿ ಎರಡು ದಿನಗಳ ಕಾಲ ಲಡಾಖ್​ ಪ್ರವಾಸ ಸಾಧ್ಯತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದಿನಿಂದ ಎರಡು ದಿನಗಳ ಕಾಲ ಲಡಾಖ್‌ಗೆ ಪ್ರವಾಸ ಕೈಗೊಳ್ಳುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ.‌ ಅವರ ಭೇಟಿಯ ವೇಳೆ ಯಾವುದೇ ಕಾರ್ಯಕ್ರಮಗಳ ವಿವರವನ್ನು ಪಕ್ಷದ ಮೂಲಗಳು ಬಹಿರಂಗಪಡಿಸಿಲ್ಲ.

ಈ ಮುಂಚೆ ಅಂದರೆ ವರ್ಷದ ಆರಂಭದಲ್ಲಿ ಜನವರಿ ತಿಂಗಳಲ್ಲಿ ರಾಹುಲ್‌ ಗಾಂಧಿ ಭಾರತ್​ ಜೋಡೋ ಯಾತ್ರೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಶ್ರೀನಗರಕ್ಕೆ ಭೇಟಿ ನೀಡಿದ್ದರು. ಫೆಬ್ರವರಿಯಲ್ಲಿ ಅವರು ತಮ್ಮ ವೈಯಕ್ತಿಕ ಭೇಟಿಗಾಗಿ ಮತ್ತೊಮ್ಮೆ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದರು. ಆದರೆ ಲಡಾಖ್​ಗೆ ಭೇಟಿ ನೀಡಲು ಸಾಧ್ಯವಾಗಿರಲಿಲ್ಲ.

ರಾಹುಲ್‌ ಗಾಂಧಿಯವರು ಮುಂದಿನ ತಿಂಗಳ ಎರಡನೇ ವಾರದಲ್ಲಿ ಯುರೋಪ್ ಪ್ರವಾಸವನ್ನು ಕೈಗೊಳ್ಳುವ ಸಾಧ್ಯತೆಯಿದೆ. ಅವರ ಭೇಟಿಯ ವೇಳೆ ಭಾರತೀಯ ವಲಸೆಗಾರರು ಮತ್ತು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳನ್ನು ಭೇಟಿಯಾಗಲಿದ್ದಾರೆ. ಜೊತೆಗೆ ಬೆಲ್ಜಿಯಂ, ನಾರ್ವೆ ಮತ್ತು ಫ್ರಾನ್ಸ್‌ಗೆ ಕೂಡ ರಾಹುಲ್​ ಗಾಂಧಿ ಭೇಟಿ ನೀಡಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಕಳೆದ ಮೇ ತಿಂಗಳಲ್ಲಿ ರಾಹುಲ್​ ಗಾಂಧಿ ಅಮೆರಿಕ ಪ್ರವಾಸ ಮುಗಿಸಿ ಬಂದಿದ್ದರು. ಅದಾದ ಬಳಿಕ ಇದೀಗ ಮತ್ತೊಮ್ಮೆ ಯುರೋಪ್​ ಪ್ರವಾಸ ಕೈಗೊಳ್ಳಲಿದ್ದಾರೆ.

ಅಮೆರಿಕ ಪ್ರವಾಸದ ವೇಳೆ ಸ್ಯಾನ್ ಫ್ರಾನ್ಸಿಸ್ಕೋ, ವಾಷಿಂಗ್ಟನ್ ಡಿಸಿ ಮತ್ತು ನ್ಯೂಯಾರ್ಕ್ ನಗರಗಳಿಗೆ ಭೇಟಿ ನೀಡಿದ್ದರು. ಅಲ್ಲಿ ಭಾರತೀಯ ಡಯಾಸ್ಪೊರಾ, ಸಾಹಸೋದ್ಯಮ ಬಂಡವಾಳಗಾರರು ಮತ್ತು ಶಾಸಕರು, ಇತರರೊಂದಿಗೆ ಸಂವಹನ ಕೂಡ ನಡೆಸಿದ್ದರು. ಇದಕ್ಕೂ ಮುನ್ನ ಅವರು ಬ್ರಿಟನ್ ಪ್ರವಾಸ ಕೈಗೊಂಡಿದ್ದರು. ಆ ವೇಳೆ ಅವರು ಲಂಡನ್​ನ ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ಮಾಡಿದ ಭಾಷಣದ ವೇಳೆ ಭಾರತೀಯ ಪ್ರಜಾಪ್ರಭುತ್ವದ ಬಗ್ಗೆ ಮಾತನಾಡಿದ್ದರು. ಅವರ ಈ ಭಾಷಣ ಸಾಕಷ್ಟು ಟೀಕೆಗೆ ಗುರಿಯಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!