ಹೊಸದಿಗಂತ ವರದಿ ಕೊಪ್ಪಳ:
ನಿರ್ಮಿತಿ ಕೇಂದ್ರದಲ್ಲಿ ಕಚೇರಿ ವ್ಯವಸ್ಥಾಪಕರಾಗಿರುವ ಮಂಜುನಾಥ ಬನ್ನಿಕೊಪ್ಪ ಕೆಲಸ ಮಾಡುವ ಕಚೇರಿ ಹಾಗೂ ಮನೆ ಮೇಲೆ ಗುರುವಾರ ಲೋಕಾಯಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಇಲ್ಲಿನ ನಿರ್ಮಿತಿ ಕೇಂದ್ರದ ಬಡಾವಣೆಯಲ್ಲಿರುವ ಕಚೇರಿಯಲ್ಲಿ ರಾಯಚೂರಿನಿಂದ ಬಂದಿರುವ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಒಟ್ಟು ಐದು ತಂಡಗಳಲ್ಲಿ ದಾಳಿ ನಡೆಸಲಾಗಿದೆ.