10 ವರ್ಷಗಳ ಪ್ರೀತಿಗೆ ಮದುವೆಯ ಮುದ್ರೆ: ಮೊದಲು ಪ್ರಪೋಸ್ ಮಾಡಿದ್ದು ಯಾರೆಂದು ಹೇಳಿದ ಹರ್ಷಿಕಾ-ಭುವನ್ ಜೋಡಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸ್ಯಾಂಡಲ್‌ವುಡ್ (Sandalwood) ನಲ್ಲೀಗ ಮದುವೆ ಸಂಭ್ರಮ. ಇನ್ನು ಕೆಲವೇ ದಿನಗಳಲ್ಲಿ ನಟಿ ಹರ್ಷಿಕಾ ಪೂಣಚ್ಚ- ಭುವನ್ ಪೊನ್ನಣ್ಣ (Bhuvan) ದಾಂಪತ್ಯ (Wedding) ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.

ಇದಕ್ಕೂ ಮುನ್ನ ಇಂದು ಸುದ್ದಿಗೋಷ್ಠಿ ನಡೆಸಿ ಜೀವನ ಅನೇಕ ವಿಚಾರಗಳನ್ನು ಬಿಚ್ಚಿಟ್ಟಿದ್ದಾರೆ.

10 ವರ್ಷಗಳ ಪ್ರೀತಿಗೆ ಮದುವೆಯೆಂಬ ಮುದ್ರೆ ಒತ್ತಲು ಸಜ್ಜಾಗಿದ್ದಾರೆ. ಇಬ್ಬರ ಮೊದಲ ಭೇಟಿಯಾಗಿದ್ದು, ಹೇಗೆ? ಯಾರ ಮೊದಲು ಪ್ರಪೋಸ್ (Prapose) ಮಾಡಿದ್ರು? ಇದೆಲ್ಲದರ ಬಗ್ಗೆ ಹೊಸ ಜೋಡಿ ಅಸಲಿ ಸಂಗತಿಯನ್ನ ಬಿಚ್ಚಿಟ್ಟಿದ್ದಾರೆ.

ಫ್ಯಾಶನ್ ಶೋವೊಂದರಲ್ಲಿ ಭುವನ್- ಹರ್ಷಿಕಾ ಭೇಟಿಯಾಗಿದ್ದು, ಭುವನ್, ಹರ್ಷಿಕಾಗೆ (Harshika Poonacha) ಮೊದಲು ಪ್ರಪೋಸ್ ಮಾಡಿ ಒಂದೇ ದಿನದಲ್ಲಿ ಉತ್ತರ ಹೇಳಬೇಕು ಅಂತಾ ಟೈಂ ಫಿಕ್ಸ್ ಮಾಡಿದ್ರಂತೆ. ಆದ್ರೆ ಫಸ್ಟ್ ಇಂಪ್ರೆಶನ್‌ನಲ್ಲೇ ಭುವನ್ ಇಷ್ಟವಾದ ಕಾರಣ ಒಂದೇ ದಿನದಲ್ಲಿ ಭುವನ್ ಪ್ರಪೋಸಲ್‌ಗೆ ಹರ್ಷಿಕಾ ಸಮ್ಮತಿ ನೀಡಿದ್ರು. ಆ ಬಳಿಕ ಕುಟುಂಬದವರಿಗೂ ಕೂಡ ಭುವನ್ ಬಗ್ಗೆ ಒಳ್ಳೆಯ ಅಭಿಪ್ರಾಯವಿದ್ದ ಕಾರಣ ಪ್ರೀತಿಗೆ ಗ್ರೀನ್ ಸಿಗ್ನಲ್ ನೀಡಿದ್ರಂತೆ ಎಂದು ಹರ್ಷಿಕಾ ಹೇಳಿದ್ದಾರೆ.

ಇನ್ನು ಯಾಕೆ ಎಷ್ಟು ವರ್ಷಗಳು ಎಲ್ಲೂ ನಮ್ಮ ಪ್ರೀತಿ ಬಗ್ಗೆ ಬಾಯ್ಬಿಟ್ಟಿರಲಿಲ್ಲ ಎಂದು ಭುವನ್ ಕ್ಲ್ಯಾರಿಟಿ ನೀಡಿದ್ದು, ಇಷ್ಟು ದಿನ ನಮ್ಮ ಮೇಲೆ ಯಾವುದೇ ಕೆಟ್ಟ ಕಣ್ಣು ಬೀಳದೇ ಇರಲಿ ಅಂತಾ ಮದುವೆ ವಿಚಾರ ಹೇಳಿರಲಿಲ್ಲ. ವೃತ್ತಿರಂಗದಲ್ಲಿ ಸೆಟಲ್ ಆಗಬೇಕಾದ ಕಾರಣ, ಇಬ್ಬರು ಸೈಲೆಂಟ್ ಆಗಿ ಇದ್ವಿ. ನಮ್ಮ ಲವ್ ಸ್ಟೋರಿ ಬಗ್ಗೆ ಆತ್ಮೀಯರಿಗೆ ತಿಳಿದಿತ್ತು. ಆದರೆ ಇತ್ತೀಚಿಗೆ ಎಲ್ಲರಿಗೂ ಗೊತ್ತಾಯ್ತು. ಪ್ರೀತಿ ಮತ್ತು ಗೆಳೆತನ ಅನ್ನೋದಕ್ಕಿಂತ ಹೆಣ್ಣು ಮತ್ತು ಗಂಡಿನ ನಡುವೆ ಎಷ್ಟರ ಮಟ್ಟಿಗೆ ಹೊಂದಾಣಿಕೆ ಇದೆ ಅನ್ನೋದು ಮುಖ್ಯವಾಗುತ್ತೆ ಎಂದು ಹೇಳಿದ್ದಾರೆ.

ಮದುವೆಯಾಗುವ ಪ್ಲ್ಯಾನ್ ಲೇಟ್ ಇತ್ತು. ಆದರೆ ಕುಟುಂಬದವರ ಒತ್ತಾಯದ ಮೇರೆಗೆ ಈಗ ಎರಡು ತಿಂಗಳ ಹಿಂದೆ ಮದುವೆ ಬಗ್ಗೆ ಪ್ಲ್ಯಾನ್ ಮಾಡಿದ್ವಿ. ಮುಂದಿನ ನಮ್ಮಿಬ್ಬರ ಕೊಡವ ಶೈಲಿಯಲ್ಲಿ ಮದುವೆ ಎಂದು ಖುಷಿಯಿಂದ ಭುವನ್ ಮಾತನಾಡಿದ್ದಾರೆ.

ಕೊಡವ ಸಂಪ್ರದಾಯದಂತೆ ಹರ್ಷಿಕಾ-ಭುವನ್ ಅವರು ಗುರುಹಿರಿಯರ ಸಮ್ಮುಖದಲ್ಲಿ ಮದುವೆಯಾಗುತ್ತಿದ್ದಾರೆ. ಆಗಸ್ಟ್ 23- 24ರಂದು ವಿರಾಜ್‌ಪೇಟೆಯಲ್ಲಿ ಹರ್ಷಿಕಾ-ಭುವನ್ ಅದ್ದೂರಿ ಮದುವೆ ನಡೆಯಲಿದೆ. ಅಮ್ಮತ್ತಿ ಕೊಡವ ಸಮಾಜದಲ್ಲಿ ಮದುವೆ ನಡೆಯಲಿದೆ. ರಾಜಕೀಯ- ಚಿತ್ರರಂಗದ ಗಣ್ಯರು ಈ ಮದುವೆಗೆ ಸಾಕ್ಷಿಯಾಗಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!