ಹೊಸದಿಗಂತ ಡಿಜಿಟಲ್ ಡೆಸ್ಕ್:
ಐರ್ಲೆಂಡ್ ಹಾಗೂ ಭಾರತ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಜಸ್ಪ್ರೀತ್ ಬುಮ್ರಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.
ಸುಮಾರು ಒಂದು ವರ್ಷದ ನಂತರ ಬುಮ್ರಾ ಮೈದಾನಕ್ಕೆ ಮರಳಲಿದ್ದಾರೆ. ಬುಮ್ರಾ ನಾಯಕತ್ವದಲ್ಲಿ ಟೀಂ ಇಂಡಿಯಾ ಕಣಕ್ಕಿಳಿಯಲಿದೆ.
ಹಿರಿಯ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ ಐರ್ಲೆಂಡ್ ಪ್ರವಾಸ ಮಾಡಿದೆ. ಇಬ್ಬರು ಆಟಗಾರರು ತಮ್ಮ ಚೊಚ್ಚಲ ಅಂತಾರಾಷ್ಟ್ರೀಯ ಟಿ20 ಪಂದ್ಯವನ್ನು ಆಡಲಿದ್ದಾರೆ. ಅವರಲ್ಲಿ ಒಬ್ಬರು ಗೇಮ್ ಫಿನಿಶರ್ ಎನಿಸಿಕೊಂಡಿರುವ ರಿಂಕು ಸಿಂಗ್ ಆಗಿದ್ದರೆ, ಇನ್ನೊಬ್ಬ ಕನ್ನಡಿಗ ಪ್ರಸಿದ್ಧ್ ಕೃಷ್ಣ ಕೂಡ ಚೊಚ್ಚಲ ಟಿ20 ಪಂದ್ಯವನ್ನಾಡಲು ಸಜ್ಜಾಗಿದ್ದಾರೆ.
ಭಾರತ ತಂಡ
ಜಸ್ಪ್ರೀತ್ ಬುಮ್ರಾ (ನಾಯಕ), ರುತುರಾಜ್ ಗಾಯಕ್ವಾಡ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ರಿಂಕು ಸಿಂಗ್, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ರವಿ ಬಿಷ್ಣೋಯ್.
ಐರ್ಲೆಂಡ್ ತಂಡ
ಪಾಲ್ ಸ್ಟಿರ್ಲಿಂಗ್ (ನಾಯಕ), ಆಂಡ್ರ್ಯೂ ಬಾಲ್ಬಿರ್ನಿ, ಹ್ಯಾರಿ ಟೆಕ್ಟರ್, ಕರ್ಟಿಸ್ ಕ್ಯಾಂಫರ್, ಜಾರ್ಜ್ ಡಾಕ್ರೆಲ್, ಲೋರ್ಕನ್ ಟಕರ್ (ವಿಕೆಟ್ ಕೀಪರ್), ಮಾರ್ಕ್ ಅಡೇರ್, ಬೆನ್ ವೈಟ್, ಬ್ಯಾರಿ ಮೆಕಾರ್ಥಿ, ಜೋಶುವಾ ಲಿಟಲ್, ಕ್ರೇಗ್ ಯಂಗ್