ಹೊಸದಿಗಂತ ಡಿಜಿಟಲ್ ಡೆಸ್ಕ್:
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗುವ ಬಿಎಂಟಿಸಿ ಉಚಿತ ಸೇವೆ ನೀಡಲಿದೆ.
ಆ. 21 ರಿಂದ ಸೆ. 2ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲ್ಲಿದ್ದು, ವಿದ್ಯಾರ್ಥಿಗಳು ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಉಚಿತವಾಗಿ ಪ್ರಯಾಣಿಸಬಹುದು.
ಪರೀಕ್ಷಾ ಪ್ರವೇಶ ಪತ್ರ ತೋರಿಸಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದು.ಬಿಎಂಟಿಸಿ ಸಾಮಾನ್ಯ ಸಾರಿಗೆಯ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಮಾಧ್ಯಮ ಪ್ರಕಟಣೆ ನೀಡಲಾಗಿದೆ.