ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ: ಹಂದಿಗಳ ಕೊಲ್ಲಲು ಜಿಲ್ಲಾಧಿಕಾರಿ ಆದೇಶ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕೇರಳದ ಕನಿಚಾರ್ ಗ್ರಾಮದಲ್ಲಿ ಆಫ್ರಿಕನ್ ಹಂದಿಜ್ವರ ಪತ್ತೆಯಾಗಿದ್ದು, ಇದೀಗ ಹಂದಿಗಳನ್ನು ಎರಡು ಫಾರ್ಮ್‌ಗಳಲ್ಲಿ ಕೊಲ್ಲಲು ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ ಎಂದು ವರದಿಯಾಗಿದೆ.

ಶುಕ್ರವಾರ ಮಲೆಯಂಪಾಡಿನಲ್ಲಿ ಈ ಜ್ವರ ಪತ್ತೆಯಾಗಿದ್ದು, ಈ ಬಗ್ಗೆ ಜಿಲ್ಲಾ ಪಶುಸಂಗೋಪನೆ ಅಧಿಕಾರಿಗಳು ದೃಢಪಟ್ಟಿಸಿದ್ದಾರೆ. ನಂತರ, ಜಿಲ್ಲಾಧಿಕಾರಿಗಳು ಹಂದಿಗಳನ್ನು ಮಲೆಯಂಪಾಡಿಯಲ್ಲಿರುವ ಮತ್ತು 10 ಕಿಮೀ ವ್ಯಾಪ್ತಿಯಲ್ಲಿರುವ ಹಂದಿಗಳನ್ನು ಕೊಲ್ಲಲು ಆದೇಶ ನೀಡಿದ್ದು, ಅದನ್ನು ಶಿಷ್ಟಾಚಾರದ ಪ್ರಕಾರ ಶವಗಳನ್ನು ಹೂಳಲು ಹೇಳಿದ್ದಾರೆ.

ಹಂದಿ ಸಾಕಾಣಿಕೆ ಕೇಂದ್ರದ ಸುತ್ತಲಿನ ಒಂದು ಕಿ.ಮೀ ಪ್ರದೇಶವನ್ನು ಸೋಂಕಿತ ಪ್ರದೇಶವೆಂದು ಘೋಷಿಸಲಾಗಿದೆ ಮತ್ತು 10 ಕಿಮೀ ವ್ಯಾಪ್ತಿಯನ್ನು ರೋಗ ಕಣ್ಗಾವಲು ವಲಯ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಈ ಪ್ರದೇಶದಲ್ಲಿ ಹಂದಿ ಮಾಂಸದ ವಿತರಣೆ ಮತ್ತು ಮಾರಾಟ, ಸಾಗಣೆಯನ್ನು ಮೂರು ತಿಂಗಳವರೆಗೆ ನಿಷೇಧಿಸಲಾಗಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!