ಹೊಸದಿಗಂತ ಡಿಜಿಟಲ್ ಡೆಸ್ಕ್:
ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) 2023ನೇ ಸಾಲಿಗೆ 4451 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ.
ಈ ಮುಂಚೆ ಆಗಸ್ಟ 21,2023ರೊಳಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು. ಆದರೆ ಇದೀಗ ಅರ್ಜಿ ಸಲ್ಲಿಕೆಯ ಅವಧಿಯನ್ನು ಆಗಸ್ಟ್ 28,2023ರ ವರೆಗೆ ವಿಸ್ತರಿಸಲಾಗಿದೆ.
ವಿದ್ಯಾರ್ಹತೆ
ಹುದ್ದೆಗಳಿಗನುಸಾರ ಪದವಿ, ಸ್ನಾತಕೋತ್ತರ ಪದವಿ, ಕಾನೂನು ಪದವಿ, ಕೃಷಿ ಪದವಿ ಸೇರಿದಂತೆ ಇನ್ನಿತರೆ ವಿದ್ಯಾರ್ಹತೆ ಹೊಂದಿರುವುದರ ಜೊತೆಗೆ ಆಗಸ್ಟ್ 1,2023ರ ಅನ್ವಯ ಕನಿಷ್ಟ 20 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
ಆಯ್ಕೆ ಪ್ರಕ್ರಿಯೆ
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನ ನೀಡಲಾಗುವುದು.