ಚಂದ್ರಯಾನ-3 ಯಶಸ್ವಿಗೆ ಮುಸ್ಲಿಂ ಸಮುದಾಯದಿಂದ ಪ್ರಾರ್ಥನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮಹತ್ವಾಕಾಂಕ್ಷೆಯ ಚಂದ್ರಯಾನ-3 (Chandrayaan-3) ಯಶಸ್ವಿಗೆ ದೇಶದೆಲ್ಲೆಡೆ ಪ್ರಾರ್ಥನೆ ಮಾಡಲಾಗುತ್ತಿದೆ. ಇದೀಗ ಮುಸ್ಲಿಮರು ಮಸೀದಿಯಲ್ಲಿ ನಮಾಜ್‌ (Namaz) ಮಾಡಿ ಪ್ರಾರ್ಥಿಸಿದ್ದಾರೆ.

ಚಂದ್ರಯಾನ-3ಚಂದ್ರನ ಅಂಗಳದಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್‌ ಆಗಲಿ ಎಂದು ಮುಸ್ಲಿಮರು ಲಕ್ನೋದ ಇಸ್ಲಾಮಿಕ್ ಸೆಂಟರ್ ಆಫ್ ಇಂಡಿಯಾದಲ್ಲಿ ನಮಾಜ್ ಮಾಡಿದ್ದಾರೆ.

ಚಂದ್ರಯಾನ-3 ಯಶಸ್ವಿ ಲ್ಯಾಂಡಿಂಗ್‌ಗಾಗಿ ಮುಸ್ಲಿಂ ಸಮುದಾಯದ ಸದಸ್ಯರು ಪ್ರಾರ್ಥನೆ ಸಲ್ಲಿಸುವ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಇದಕ್ಕೂ ಮುನ್ನ ಚಂದ್ರಯಾನ-3 ಯಶಸ್ವಿಯಾಗಿ ಚಂದ್ರನ ಮೇಲೆ ಇಳಿಯಲು ವಾರಣಾಸಿಯ ಕಾಮಾಖ್ಯ ದೇವಸ್ಥಾನದಲ್ಲಿ ಹವನ ನಡೆಸಲಾಯಿತು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!