ಹೊಸದಿಗಂತ ಡಿಜಿಟಲ್ ಡೆಸ್ಕ್:
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಸಚಿವ ಹಾಗೂ ರಾಜ ವಂಶಸ್ಥ ಶ್ರೀರಂಗದೇವರಾಯಲು(87) ಅವರು ಮಂಗಳವಾರ ನಿಧನವಾಗಿದ್ದಾರೆ.
ಇಂದು ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿರುವ ಅವರ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಶ್ರೀರಂಗದೇವರಾಯಲು ಅವರು ಪತ್ನಿ ಲಲಿತಾರಾಣಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ವಿಜಯಸಾಮ್ರಾಜ್ಯದ ವಂಶಸ್ಥರಾಗಿದ್ದ ಶ್ರೀರಂಗದೇವರಾಯಲು ಅವರು 1974ರಲ್ಲಿ ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಮೂಲಕ ಸಕ್ರಿಯ ರಾಜಕಾರಣ ಪ್ರವೇಶಿಸಿದ್ದರು.
ವೀರಪ್ಪ ಮೋಯ್ಲಿ ಮುಖ್ಯಮಂತ್ರಿ ಸಂಪುಟದಲ್ಲಿ ಶ್ರೀರಂಗದೇವರಾಯಲು ಕಾಡಾ ಅಧ್ಯಕ್ಷರಾಗಿದ್ದರು. ಎಸ್.ಎಂ.ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ಖಾದಿ ಗ್ರಾಮೋದ್ದೋಗ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.