ಹಬ್ಬಕ್ಕೆ ತಾವರೆ ಹೂ ತರಲು ಕೆರೆಗೆ ಇಳಿದ ತಂದೆ-ಮಗ ದುರ್ಮರಣ

ಹೊಸದಿಗಂತ ಡಿಜಿಟಲ್ ಡೆಸ್ಕ್:‌

ತಾವರೆ ಹೂ ತರಲು ಕೆರೆಗೆ ಇಳಿದ ತಂದೆ-ಮಗ ಇಬ್ಬರೂ ಮೃತಪಟ್ಟ ದುರಂತ ಘಟನೆ
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಭೂಚನಹಳ್ಳಿಯ ಕೆರೆಯಲ್ಲಿ ನಡೆದಿದೆ.

ತಂದೆ ಪುಟ್ಟರಾಜು(42) ಮತ್ತು ಮಗ ಕೇಶವ(14) ಮೃತ ದುರ್ದೈವಿಗಳು. ಮೃತರು ದೊಡ್ಡಬಳ್ಳಾಪುರ ಶಾಂತಿನಗರದ ನಿವಾಸಿಗಳು.

ವರಮಹಾಲಕ್ಷ್ಮಿ ಹಬ್ಬ ಇರುವುದರಿಂದ ಮಾರಾಟಕ್ಕಾಗಿ ತಾವರೆ ಹೂ ತರಲು ಅಪ್ಪ ಮಗ ಇಬ್ಬರೂ ಬುಧವಾರ ಸಂಜೆ ಕೆರೆಗೆ ಇಳಿದಿದ್ದಾರೆ. ಈ ವೇಳೆ ಕೆಸರಿನಲ್ಲಿ ಸಿಲುಕಿ ಇಬ್ಬರು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.

ಇಂದು ಬೆಳಗ್ಗೆ ಅಗ್ನಿಶಾಮಕದಳದ ಸಿಬ್ಬಂದಿ ಕೆರೆಯಿಂದ ಮೃತದೇಹಗಳನ್ನು ಹೊರಗೆ ತೆಗೆದಿದ್ದಾರೆ. ಮೃತಪಟ್ಟವರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದ್ದು, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!