ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾವೇರಿ ನೀರು ವಿವಾದ ಕುರಿತು ತಮಿಳುನಾಡು ಸರ್ಕಾರ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ನ ತ್ರಿಸದಸ್ಯ ಪೀಠ ಇಂದು ವಿಚಾರಣೆ ನಡೆಸಲಿದೆ.
ಕಾವೇರಿ ನೀರು ಹರಿಸುವಂತೆ ಕೋರಿ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ಈ ಅರ್ಜಿಯ ವಿಚಾರಣೆಯನ್ನು ನಡೆಸುವುದಾಗಿ ಸುಪ್ರೀಂ ಸಮ್ಮತಿ ಸೂಚಿಸಿತ್ತು. ಬಳಿಕ ಅರ್ಜಿಯ ವಿಚಾರಣೆಗಾಗಿ ಸುಪ್ರೀಂ ಕೋರ್ಟ್ ಪ್ರತ್ಯೇಕ ಪೀಠ ರಚಿಸಿದ್ದು, ಇಂದು ಅರ್ಜಿ ವಿಚಾರಣೆ ನಡೆಯಲಿದೆ.
ಇದಕ್ಕೂ ಮುನ್ನಾ ದಿನವಾದ ನಿನ್ನೆ (ಗುರುವಾರ) ತಮಿಳುನಾಡಿಗೆ ಕಾವೇರಿ ನೀರು ಬಿಡುವ ಕುರಿತು ರಾಜ್ಯ ಸರ್ಕಾರ ಅಫಿಡವಿಟ್ ಸಲ್ಲಿಸಿದೆ. ಅದರಲ್ಲಿ ಕಾವೇರಿ ನೀರು ಬಿಡುಗಡೆಗೆ ತಮಿಳುನಾಡು ಒತ್ತಾಯ ಮಾಡಬಾರದು. ಅಲ್ಲದೆ ಬಿಳಿಗುಂಡ್ಲುವಿನ ಅಂತರಾಜ್ಯ ಗಡಿಯಲ್ಲಿ ಮೇಕೆದಾಟು ಯೋಜನೆಗೆ ತಮಿಳುನಾಡು ಕೂಡ ಅನಗತ್ಯವಾಗಿ ವಿರೋಧಿಸುತ್ತಿದೆ ಎಂದು ಅಫಿಡವಿಟ್‌ನಲ್ಲಿ ಹೇಳಲಾಗಿದೆ.