ಹೊಸದಿಗಂತ ವರದಿ ಸೋಮವಾರಪೇಟೆ:
ಕಾಡಾನೆ ದಾಳಿಗೆ ಕೃಷಿಕರೊಬ್ಬರು ಬಲಿಯಾಗಿರುವ ಘಟನೆ ಸೋಮವಾಪೇಟೆ ತಾಲೂಕಿನ ಅಡಿಯನಾಡೂರು ಗ್ರಾಮದಲ್ಲಿ ಶುಕ್ರವಾರ ನಡೆದಿದೆ.ಗ್ರಾಮದ ಕೃಷಿಕ ಈರಪ್ಪ(60) ಎಂಬವರೃ ಮೃತಪಟ್ಟವರು.
ಶುಕ್ರವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ತಮ್ಮ ಹಾಲು ಕೊಡುವ ಹಸುವನ್ನು ಹುಡುಕಿಕೊಂಡು ಗೌರಿಗದ್ದೆ ಸಮೀಪ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಸಂದರ್ಭ ಪಕ್ಕದ ಅರಣ್ಯದಿಂದ ಬಂದ ಕಾಡಾನೆ ದಾಳಿ ನಡೆಸಿರುವುದಾಗಿ ಹೇಳಲಾಗಿದೆ.
ಈ ಸಂದರ್ಭ ಈರಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.