ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ತೈಲ ನಿಗಮದಲ್ಲಿ490 ಟ್ರೇಡ್ ಅಪ್ರೆಂಟಿಸ್, ಟೆಕ್ನೀಶಿಯನ್ ಅಪ್ರೆಂಟಿಸ್ ಮತ್ತು ಅಕೌಂಟ್ಸ್ ಎಕ್ಸಿಕ್ಯುಟಿವ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
10ನೇ ತರಗತಿ, ಐಟಿಐ, ಪದವಿ, ಡಿಪ್ಲೋಮಾ ವಿದ್ಯಾರ್ಹತೆ ಜೊತೆಗೆ ಆಗಸ್ಟ್ 31,2023ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಟೈಫೆಂಡ್ ಅನ್ನು ನೀಡಲಾಗುವುದು.
ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಸೆಪ್ಟೆಂಬರ್ 10,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.