ಕಾವೇರಿ ನೀರು ವಿವಾದ: ಸೆಪ್ಟೆಂಬರ್ 1ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಾವೇರಿ ನದಿ ನೀರು ಹರಿಸುವಂತೆ ಕೋರಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್ ನಲ್ಲಿ ನಡೆಸಲಾಯಿತು. ಈ ತಕ್ಷಣಕ್ಕೆ ಆದೇಶ ಹೊರಡಿಸುವುದು ಕಷ್ಟ ಎಂದು ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 1ಕ್ಕೆ ಮುಂದೂಡಲಾಗಿದೆ.

ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ, ಸೋಮವಾರ ಉಭಯ ರಾಜ್ಯಗಳ ಸಭೆ ನಡೆಸಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಸೂಚನೆ ನೀಡಿದೆ. ಅಲ್ಲದೆ ಸಭೆಯಲ್ಲಿ ಎರಡು ರಾಜ್ಯಗಳ ಜಲಾಶಯಗಳ ನೀರಿನ ವಾಸ್ತವ ಸ್ಥಿತಿ ಕುರಿತು ವರದಿ ಪಡೆದು ಸಲ್ಲಿಸಲು ಸೂಚಿಸಲಾಗಿದೆ.

ಸುಪ್ರೀಂ ನಲ್ಲಿ ಕರ್ನಾಟಕ ಪರ ಹಿರಿಯ ವಕೀಲ ಶ್ಯಾಮ ದಿವಾನ್ ಮತ್ತು ತಮಿಳುನಾಡು ಪರ ಹಿರಿಯ ವಕೀಲ ಮುಕುಲ್ ರೋಹಟಗಿ ಅವರು ವಾದ ಮಂಡಿಸಿರು. ಉಭಯ ರಾಜ್ಯಗಳ ವಾದ ಆಲಿಸಿದ ನ್ಯಾಯಪೀಠ, ಉಭಯ ರಾಜ್ಯಗಳ ಜಲಾಶಯಗಳ ನೀರಿನ ಸಂಗ್ರಹದ ಬಗ್ಗೆ ವಾಸ್ತವ ವರದಿ ಸಲ್ಲಿಸುವಂತೆ ಹೇಳಿತು. ಬಳಿಕ ಮುಂದಿನ ವಿಚಾರಣೆಯನ್ನು ಬರುವ ಶುಕ್ರವಾರಕ್ಕೆ ಮುಂದೂಡಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!