ಹೊಸದಿಗಂತ ವರದಿ ಕಲಬುರಗಿ:
ವಿದ್ಯಾಭ್ಯಾಸ ಚೆನ್ನಾಗಿ ಮಾಡು, ಸರಿಯಾಗಿ ಓದು ಎಂದು ಪೋಷಕರು ಬೈದಿದ್ದಕ್ಕೆ ಪಿಯು ವಿದ್ಯಾರ್ಥಿನಿಯೊಬ್ಬಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಸೇಡಂ ತಾಲೂಕಿನ ಕೋಡ್ಲಾ ಗ್ರಾಮದ ಕಾವೇರಿ (17) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಕಾಲೇಜಿಗೆ ಹೋಗು, ಚೆನ್ನಾಗಿ ಓದಿಕೊ ಎಂದು ಬುದ್ದಿವಾದ ಹೇಳಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದೆ.
ವಿದ್ಯಾರ್ಥಿನಿಯು ಸೇಡಂ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪಿಯು ಪ್ರಥಮ ವರ್ಷದಲ್ಲಿ ಓದುತ್ತಿದ್ದಳು. ನಿನ್ನೆ ತಡರಾತ್ರಿ ಮನೆಯಿಂದ ಹೊರಗೆ ಹೋಗಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.