ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ಸ್ಟಾರ್ ಆಟಗಾರ ನೀರಜ್ ಚೋಪ್ರಾ ಅವರು ಪ್ಯಾರಿಸ್‌ನಲ್ಲಿ ನಡೆಯಲಿರುವ ಒಲಂಪಿಕ್ಸ್‌ಗೆ ಅರ್ಹತೆ ಪಡೆದಿದ್ದಾರೆ.
ಇಂದು ಹಂಗೇರಿಯ ಬುಡಾಪೆಸ್ಟ್‌ನಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2023ರಲ್ಲಿ ಜಾವೆಲಿನ್ ತಾರೆ ನೀರಜ್ ಚೋಪ್ರಾ ಅವರು ತಮ್ಮ ಮೊದಲ ಪ್ರಯತ್ನದಲ್ಲೇ 88.77 ಮೀಟರ್ ಎಸೆಯುವ ಮೂಲಕ ಫೈನಲ್‌ಗೆ ಪ್ರವೇಶಿಸಿದ್ದಾರೆ ಹಾಗೂ ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಕೂಡ ಪಡೆದುಕೊಂಡಿದ್ದಾರೆ.
ಫೈನಲ್ ಗೆ ನೇರ ಅರ್ಹತೆ ಪಡೆಯಲು 83.00 ಮೀ. ಜಾವೆಲಿನ್ ಎಸೆಯಬೇಕಿತ್ತು. ಆದರೆ ನೀರಜ್ ಚೋಪ್ರಾ ತಮ್ಮ ಮೊದಲ ಪ್ರಯತ್ನದಲ್ಲೇ 88.77 ಮೀಟರ್ ಜಾವೆಲಿನ್ ಎಸೆದರು. ಈ ಮೂಲಕ ಅವರು ಫೈನಲ್‌ಗೆ ಅರ್ಹತೆ ಪಡೆದಿದ್ದು, ಫೈನಲ್ ಸ್ಪರ್ಧೆಯು ಭಾನುವಾರದಂದು ನಡೆಯಲಿದೆ.