Monday, December 22, 2025

ಜಾಗ್ರತೆ ಜನರೇ.. ಚಾಮರಾಜನಗರದಲ್ಲಿ ಐದು ಹುಲಿಗಳು ಪ್ರತ್ಯಕ್ಷ, ನಿಷೇಧಾಜ್ಞೆ ಜಾರಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಚಾಮರಾಜನಗರ ತಾಲೂಕಿನ ನಂಜೆದೇವಪುರ ಗ್ರಾಮದ ಬಳಿ ಬರೋಬ್ಬರಿ ಐದು ಹುಲಿಗಳು ಒಟ್ಟಿಗೆ ಪ್ರತ್ಯಕ್ಷವಾಗಿದ್ದು, ಸದ್ಯ ಜನರ ಆತಂಕಕ್ಕೆ ಕಾರಣವಾಗಿದೆ.

ನಂಜೆದೇವಪುರ ಸೇರಿ ಮೂರು ಗ್ರಾಮಗಳಲ್ಲಿ ಇಂದಿನಿಂದ ನಾಳೆ ಸಂಜೆ 6ರವರೆಗೂ 144 ಸೆಕ್ಷನ್ ಜಾರಿ ಮಾಡಿ ಚಾಮರಾಜನಗರ ತಹಶೀಲ್ದಾರ್​​​ ಗಿರಿಜಾ ಆದೇಶ ಹೊರಡಿಸಿದ್ದಾರೆ.

ಈಗಾಗಲೇ 5 ಹುಲಿಗಳಿರುವ ಜಾಗದ ಲೊಕೇಷನ್​​ ಅನ್ನು ಅರಣ್ಯ ಸಿಬ್ಬಂದಿ ಟ್ರ್ಯಾಕ್ ಮಾಡಿದ್ದಾರೆ. ಆದರೆ ಚಾಮರಾಜನಗರ ಜಿಲ್ಲೆಯಲ್ಲಿ ಇರುವುದು ಕೇವಲ ಇಬ್ಬರೇ ಪಶು ವೈದ್ಯರು ಮಾತ್ರ. ಹೀಗಾಗಿ ಹುಲಿಗಳನ್ನು ಸೆರೆ ಹಿಡಿಯಲು ಕಷ್ಟಸಾಧ್ಯ ಎನ್ನುತ್ತಿದ್ದಾರೆ ಅರಣ್ಯ ಸಿಬ್ಬಂದಿ. ಸದ್ಯ ಹುಲಿಗಳ ಸೆರೆ ಕಾರ್ಯಾಚರಣೆ ಹಿನ್ನೆಲೆ  ನಂಜೆದೇವನಪುರ, ವೀರನಪುರ, ಉಡಿಗಾಲ ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಆ ಮೂಲಕ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದ್ದು, ಯಾರೂ ಗುಂಪು ಸೇರಬಾರದು, ಮನೆಯಿಂದ ಹೊರಬರದಂತೆ ತಿಳಿಸಲಾಗಿದ್ದು, ಮೂರು ಗ್ರಾಮಗಳ ಜನರು ಸಹಕರಿಸುವಂತೆ ತಹಶೀಲ್ದಾರ್ ಗಿರಿಜಾ ಮನವಿ ಮಾಡಿದ್ದಾರೆ.

error: Content is protected !!