ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಆನ್‍ಲೈನ್ ಬೆಟ್ಟಿಂಗ್ ಪ್ಲಾಟ್‍ಫಾರ್ಮ್‍ಗಳ ಬಗ್ಗೆ ಜಾಹೀರಾತುಗಳ ವಿಚಾರ ಕೇಂದ್ರ ಸರ್ಕಾರ ಮಾಧ್ಯಮಗಳಿಗೆ ಎಚ್ಚರಿಕೆ ಸೂಚನೆ ನೀಡಿದೆ. ಮಾಧ್ಯಮಗಳು ತಕ್ಷಣ ಇಂತಹ ಜಾಹೀರಾತುಗಳನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಕಾನೂನು ಕ್ರಮ ಕೆ`ಗೊಳ್ಳಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದೆ.
ಟಿವಿ ಚಾನೆಲ್‍ಗಳು, ಡಿಜಿಟಲ್ ಮೀಡಿಯಾ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ರೀತಿಯ ಬೆಟ್ಟಿಂಗ್ ಹಾಗೂ ಜೂಜು ಸಂಬಂಧಿತ ಜಾಹೀರಾತುಗಳನ್ನು ತಡೆಯುವ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಸೂಚಿಸಿದೆ. ಆನ್‌ಲೈನ್ ಜಾಹೀರಾತು ಮಧ್ಯವರ್ತಿಗಳಿಗೆ ಇಂತಹ ಜಾಹೀರಾತುಗಳನ್ನು ಭಾರತೀಯ ಪ್ರೇಕ್ಷಕರಿಗೆ ಗುರಿಪಡಿಸದಂತೆ ಸೂಚಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಕ್ರಿಕೆಟ್‍ನಲ್ಲಿ ಬೆಟ್ಟಿಂಗ್ ಮತ್ತು ಜೂಜಿನ ವೇದಿಕೆಗಳ ಪ್ರಚಾರ ಹೆಚ್ಚಿಸುವ ಪ್ರವೃತ್ತಿ ಇದೆ. ಶೀಘ್ರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾಕೂಟ ಆರಂಭವಾಗಲಿದೆ. ಈ ನಿಟ್ಟಿನಲ್ಲಿ ಸಚಿವಾಲಯ ಕ್ರಮಕ್ಕೆ ಮುಂದಾಗಿದೆ ಎಂದು ಎಚ್ಚರಿಕೆ ನೀಡಲಾಗಿದೆ.