ದಸರೀಘಟ್ಟದ ಶ್ರೀ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ಸಂಭ್ರಮದ ಶ್ರೀ ವರಮಹಾಲಕ್ಷ್ಮಿ ಪೂಜೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ತಿಪಟೂರು ತಾಲ್ಲೂಕಿನ ದಸರೀಘಟ್ಟದ ಶ್ರೀ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಚೌಡೇಶ್ವರಿ ದೇವಿ ದೇವಾಲಯದ ಆವರಣದಲ್ಲಿ ಶ್ರೀ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಆಯೋಜಿಸಲಾಗಿದ್ದ ಶ್ರೀ ವರಮಹಾಲಕ್ಷ್ಮಿ ಹಾಗೂ ಶ್ರೀ ಚೌಡೇಶ್ವರಿ ದೇವಿ ಪೂಜಾ ಕಾರ್ಯಕ್ರಮವು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಗಳವರ ದಿವ್ಯ ಸಾನಿಧ್ಯದಲ್ಲಿ ಹೋಮ, ಅಭಿಷೇಕ ಮತ್ತು ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು.

ಪೂಜಾ ಕಾರ್ಯಕ್ರಮದಲ್ಲಿ ದಸರೀಘಟ್ಟ ಆದಿಚುಂಚನಗಿರಿ ಶಾಖಾ ಮಠದ ಪೂಜ್ಯ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ, ಹಾಸನ ಆದಿಚುಂಚನಗಿರಿ ಶಾಖಾ ಮಠದ ಪೂಜ್ಯ ಶ್ರೀ ಶಂಭುನಾಥ ಸ್ವಾಮೀಜಿ, ಚಿಕ್ಕಬಳ್ಳಾಪುರ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಮಂಗಳನಾಥ ಸ್ವಾಮೀಜಿ, ಶೃಂಗೇರಿ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಗುಣನಾಥ ಸ್ವಾಮೀಜಿ, ಗಣ್ಯರು ಹಾಗೂ ಶ್ರೀ ಮಠದ ಸದ್ಭಕ್ತರು ಉಪಸ್ಥಿತರಿದ್ದು , ಮಹಾಸ್ವಾಮೀಜಿಗಳವರಿಂದ ಆಶೀರ್ವಾದ ಪಡೆದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!