ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೆಚ್ಎಎಲ್ ಏರ್ಪೋರ್ಟ್ನಿಂದ ಬೆಂಗಳೂರಿನ ಪೀಣ್ಯದಲ್ಲಿರುವ ಇಸ್ರೋ ಟೆಲಿಮೆಟ್ರಿ ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್ವರ್ಕ್ ಮಿಷನ್ ಕಂಟ್ರೋಲ್ ಕಾಂಪ್ಲೆಕ್ಸ್ಗೆ ಪ್ರಧಾನಿ ಮೋದಿ ಆಗಮಿಸಿದರು. ಅವರನ್ನು ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಅತ್ಯಂತ ಆತ್ಮೀಯವಾಗಿ ಸ್ವಾಗತಿಸಿದರು. ಬಾಹ್ಯಾಕಾಶ ಕೇಂದ್ರದ ನಿರ್ದೇಶಕ ಎಂ.ಶಂಕರನ್, ಇಸ್ಟ್ರಾಕ್ ನಿರ್ದೇಶಕ ಬಿ.ಎನ್.ರಾಮಕೃಷ್ಣ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪ್ರಧಾನಿ ಮೋದಿಗೆ ಪುಷ್ಪಗುಚ್ಛ ನೀಡಿ ಇಸ್ರೋ ಕೇಂದ್ರಕ್ಕೆ ಪ್ರಧಾನಿಯವರನ್ನು ಬರಮಾಡಿಕೊಳ್ಳಲಾಯಿತು. ಕೇಂದ್ರಕ್ಕೆ ಬರುತ್ತಿದ್ದಂತೆಯೇ ಚಂದ್ರಯಾನ-3 ಯಶಸ್ವಿಯಾಗಿ ಪ್ರಧಾನಿ ಅವರು ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ಅವರನ್ನು ಅಭಿನಂದಿಸಿದರು.
#WATCH | Prime Minister Narendra Modi meets ISRO chief S Somanath and other scientists of the ISRO team involved in #Chandrayaan3 Mission at ISRO Telemetry Tracking & Command Network Mission Control Complex in Bengaluru and congratulates them for the successful landing of… pic.twitter.com/D4icGMVAkP
— ANI (@ANI) August 26, 2023