ಸದ್ಯಕ್ಕೆ ಯಾವುದೇ ಬಿಪಿಎಲ್‌ ಕಾರ್ಡ್‌ ರದ್ದಾಗೋದಿಲ್ಲ, ಚಿಂತೆ ಬೇಡ- ಕೆ.ಹೆಚ್‌.ಮುನಿಯಪ್ಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯದಲ್ಲಿ ಪ್ರಸ್ತುತ ಯಾವುದೇ ಬಿಪಿಎಲ್‌ ಪಡಿತರ ಚೀಟಿ ರದ್ದಾಗುವುದಿಲ್ಲ, ಇದರ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್​.ಮುನಿಯಪ್ಪ ಸ್ಪಷ್ಟಪಡಿಸಿದರು. ಈ ಹಿಂದೆ ರಾಜ್ಯದಲ್ಲಿ ನಾಲ್ಕು ಚಕ್ರದ ವಾಹನ ಇರುವವರ ಬಿಪಿಎಲ್‌ ಕಾರ್ಡ್‌ ರದ್ದಾಗಲಿದೆ ಎಂಬ ಸುದ್ದಿ ಹರಡಿತ್ತು. ಇದೆಲ್ಲದಕ್ಕೂ ಇತಿಶ್ರೀ ಹಾಡಿದ ಸಚಿವರು, ಸದ್ಯ ಅಂತಹ ಯಾವುದೇ ನಿರ್ಧಾರ ಇಲ್ಲ ಎಂದರು.

ಹಾಸನದಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಸಚಿವರು, ಮೂರು ಲಕ್ಷ ಅರ್ಜಿಗಳು ಬಂದಿವೆ ಇವೆಲ್ಲವನ್ನು ಪರಿಶೀಲಿಸಿ ಮೂರು ತಿಂಗಳಲ್ಲಿ ಅರ್ಹರಿಗೆ ಬಿಪಿಎಲ್​, ಎಪಿಎಲ್​​ ಕಾರ್ಡ್ ನೀಡಲಾಗುವುದು ಎಂದರು. ಹಾಗೆಯೇ ಸ್ಥಗಿತಗೊಂಡಿರುವ ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಸುವ ಆನ್‌ಲೈನ್‌ ಪೋರ್ಟಲ್ ಪ್ರಾರಂಭಿಸಲು ಸದ್ಯಕ್ಕೆ ಅನುಮತಿ ಇಲ್ಲ ಎಂದರು.

ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನೀತಿಸಂಹಿತೆ ಜಾರಿಯಾಗುತ್ತಿದ್ದಂತೆ ಈ ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಸುವ ಆನ್‌ಲೈನ್‌ ಪೋರ್ಟಲ್ ಸ್ಥಗಿತಗೊಳಿಸಲಾಗಿತ್ತು. ಪ್ರಸ್ತುತ ಕಾಂಗ್ರೆಸ್‌ ಸರ್ಕಾರ ರಚನೆಯಾಗಿ ಮೂರು ತಿಂಗಳು ಕಳೆದರೂ ಇನ್ನೂ ಪೋರ್ಟಲ್‌ ಆರಂಭಿಸಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!